Wednesday, January 22, 2025

ಪತ್ನಿಯ ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಪತಿರಾಯ

ಚಿಕ್ಕಬಳ್ಳಾಪುರ: ಚಾಕುವಿನಿಂದ ತನ್ನ ಪತ್ನಿಯ ಜೊತೆ ಅಕ್ರಮ ಸಂಬಂಧ ಪ್ರಿಯಕರನ ಕತ್ತು ಸೀಳಿ ಆಕೆಯ ಪತಿ ರಕ್ತ ಕುಡಿದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ನಡೆದಿದೆ.

ಹೌದು, ವಿಜಯ್ ಹಾಗೂ ಮಾರೇಶ್ ಇಬ್ಬರು ಚಿಂತಾಮಣಿ ನಗರದಲ್ಲಿ ವಾಸವಾಗಿದ್ದು, ಇಬ್ಬರೂ ಸಹ ಟಾಟಾ ಏಸ್ ವಾಹನದಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದರು. ಆದರೆ ತನ್ನ ಹೆಂಡತಿ ಮಾಲಾ ಜೊತೆ ಮಾರೇಶ್ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಗೊಂಡ ವಿಜಯ್, ಮಾರೇಶ್‌ನನ್ನು ಕೊಲೆ ಮಾಡುವ ಉದ್ದೇಶದಿಂದ ಟಾಟಾ ಏಸ್ ಗಾಡಿ ತೆಗೆದುಕೊಂಡು ಬಾ ಬಾಡಿಗೆ ಇದೆ, ಹೋಗಿ ಬರೋಣ ಎಂದು ಕರೆದುಕೊಂಡು ಹೋಗಿ ಸಿದ್ದೇಪಲ್ಲಿ ಕ್ರಾಸ್ ಬಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೃತ್ಯ ನಡೆಸಿದ್ದಾನೆ.

ಇದನ್ನೂ  ಓದಿ: ಬೈಕ್‌ಗೆ ಲಾರಿ ಡಿಕ್ಕಿ ಇಬ್ಬರು ಸಾವು 

ವಿಜಯ್ ಚಾಕುವಿನಿಂದ ಮಾರೇಶ್ ಕತ್ತು ಸೀಳಿದ್ದು, ರಕ್ತ ಹೊರಚಿಮ್ಮಿದಾಗ ಅದನ್ನು ಕುಡಿದು ತನ್ನ ಕೋಪ ಪ್ರತಾಪ ತೀರಿಸಿಕೊಂಡಿದ್ದಾನೆ. ಈ ಘಟನೆ ಜೂನ್ 19ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿಜಯ್ ಜೊತೆ ಇದ್ದ ಸ್ನೇಹಿತ ಈ ಕತ್ತು ಸೀಳಿ ರಕ್ತ ಕುಡಿಯುವ ವಿಡಿಯೋವನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾನೆ.

RELATED ARTICLES

Related Articles

TRENDING ARTICLES