Friday, November 22, 2024

ಸಿ.ಟಿ ರವಿ, ಈಶ್ವರಪ್ಪ, ನಾನು ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು : ಸಿದ್ದರಾಮಯ್ಯ

ಬೆಂಗಳೂರು : ಸಿ.ಟಿ ರವಿ, ಈಶ್ವರಪ್ಪ ಹಾಗೂ ನಾನು ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನೆಲಮಂಗಲ ಬಳಿಯ ಮಹದೇವಪುರದ ಕ್ಷೇಮವನದಲ್ಲಿ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರುಗಳಿಗೆ ಸೋಮವಾರ ಹಮ್ಮಿಕೊಂಡಿದ್ದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾನು ಮೊದಲ ಬಾರಿ ಹಣಕಾಸು ಸಚಿವನಾದಾಗ ‘ನೂರು ಕುರಿ ಎಣಿಸಲು ಬಾರದವನು’ ಬಜೆಟ್ ಹೇಗೆ ಮಾಡ್ತಾರೆ? ಎಂದು ಪತ್ರಿಕೆಯೊಂದು ಟೀಕಿಸಿತ್ತು. ಟೀಕೆಯನ್ನು ನಾನು ಸವಾಲಾಗಿ ಸ್ವೀಕರಿಸಿ ನಿರಂತರ ವಿಷಯ ತಜ್ಞರ ಜತೆ ಚರ್ಚಿಸಿ ಬಜೆಟ್ ಮಂಡಿಸಿದೆ ಎಂದು ತಿಳಿಸಿದರು.

ಮರುದಿನ ಪತ್ರಿಕೆಯೊಂದು ನನ್ನ ಬಜೆಟ್ ಅನ್ನು ಅತ್ಯುತ್ತಮ ಎಂದು ಶ್ಲಾಘಿಸಿ ಸಂಪಾದಕೀಯ ಬರೆಯಿತು. ಹೀಗಾಗಿ, ಜ್ಞಾನ ದಾಹ ಮತ್ತು ಅಧ್ಯಯನಶೀಲತೆಯನ್ನು ಬೆಳೆಸಿಕೊಳ್ಳಿ ಎಂದು ನೂತನ ಶಾಸಕರಿಗೆ ಸಲಹೆ ನೀಡಿದರು.

ಇದನ್ನೂ ಓದಿ : 5 ಕೆಜಿ ಅಕ್ಕಿ ಈಗಾಗಲೇ ಇದ್ಯಲ್ಲ, ತೊಂದರೆ ಏನು ಇಲ್ವಲ್ಲ : ಸತೀಶ್ ಜಾರಕಿಹೊಳಿ

ಸಿಎಂ ಆಗಲು ಸಂವಿಧಾನ ಕಾರಣ

ನಾನು, ನನ್ನಂಥವರು ಶಾಸಕರಾಗಲು, ಮುಖ್ಯಮಂತ್ರಿ ಆಗಲು ಡಾ.ಬಿ.ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಕಾರಣ. ಸಂವಿಧಾನ ಇಲ್ಲದಿದ್ದರೆ ಸಿ.ಟಿ ರವಿ, ಕೆ.ಎಸ್ ಈಶ್ವರಪ್ಪ, ನಾನು ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ಸಂವಿಧಾನದ ಮೌಲ್ಯ ಅರಿತುಕೊಳ್ಳಿ ಎಂದು ಸಿದ್ದರಾಮಯ್ಯ ಹೇಳಿದರು.

ವಾಟಾಳ್ ನಾಗರಾಜ್ ಮಾದರಿ ಶಾಸಕ

ವಾಟಾಳ್ ನಾಗರಾಜ್ ಅವರು ಒಬ್ಬ ಮಾದರಿ ಶಾಸಕರಾಗಿದ್ದರು. ಅಧಿವೇಶನದ ಬೆಲ್ ಆಗುತ್ತಿದ್ದಂತೆ ಸದನದ ಒಳಗೆ ಬಂದು ಕೂರುತ್ತಿದ್ದರು. ಅಧಿವೇಶನ ಮುಗಿಯುವವರೆಗೂ ಅಲುಗಾಡದೆ ಕೂರುತ್ತಿದ್ದರು. ಇದನ್ನು ಪ್ರತಿಯೊಬ್ಬರೂ ಪಾಲಿಸಿ ಎಂದು ವಾಟಾಳ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

RELATED ARTICLES

Related Articles

TRENDING ARTICLES