Monday, December 23, 2024

ಕಾಂಗ್ರೆಸ್ ಬಂದ್ಮೇಲೆ ಬಿಜೆಪಿಯಲ್ಲಿ ಶಿಸ್ತು ಇಲ್ಲ : ಕೆ.ಎಸ್‌ ಈಶ್ವರಪ್ಪ

ಹುಬ್ಬಳ್ಳಿ : ಕೇಸರಿಪಡೆಯಲ್ಲಿ ಶಿಸ್ತು ಕಳೆದು ಹೋಗಿ ಅಶಿಸ್ತು ಬಂದಿದೆ ಎಂದು ಕೆ.ಎಸ್​ ಈಶ್ವರಪ್ಪ ಕಿಡಿಕಾರಿದ್ದಾರೆ. 

ಹೌದು, ಬಿಜೆಪಿಯಲ್ಲಿ ಸದ್ಯ ಅಶಿಸ್ತು ಮೂಡಿದೆ, ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸಿಗರು ಬಂದ ನಂತರ ಪಕ್ಷದಲ್ಲಿ ಅಲ್ಪಸ್ವಲ್ಪ ಅಶಿಸ್ತು ಮೂಡಿದ್ದು, ಅಶಿಸ್ತು ತೋರುವವರ ಬಾಲವನ್ನು ಕಟ್‌ ಮಾಡ್ತೇವೆ ಎಂದು ಬಾಂಬೆ ಬಾಯ್ಸ್ ವಿರುದ್ದ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಗುಡುಗಿದ್ದಾರೆ.

ಇದನ್ನೂ ಓದಿ: ಸತೀಶ್​ ಜಾರಕಿಹೊಳಿ ಸಿಎಂ ಆಗಲಿ : ಸಚಿವ ಕೆ.ಎನ್.ರಾಜಣ್ಣ

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಲದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಪರೇಷನ್ ಕಮಲ ಮುಳುವಾಯ್ತು. ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಕರೆದುಕೊಂಡು ಬಂದಿರುವುದಕ್ಕೆ ಸಮಸ್ಯೆ ಅನುಭವಿಸುತ್ತಿದ್ದೇವೆ. ನಮ್ಮ ಪಕ್ಷಕ್ಕೆ ಕಾಂಗ್ರೆಸ್‌ನ ಗಾಳಿ ಸೋಕಿರುವುದರಿಂದ ಬಿಜೆಪಿಯಲ್ಲಿ ಅಲ್ಲಲ್ಲಿ ಶಿಸ್ತು ಕಳೆದು ಹೋಗಿದೆ. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರೊಂದಿಗೆ ಮಾತನಾಡುತ್ತೇನೆ ಎಂದರು.

ಇದನ್ನೂ ಓದಿ: ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ

ಇನ್ನು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ನಂತರ ಕಾರ್ಯಕರ್ತರು ನಿರಾಶೆಯಲ್ಲಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಏಳು ತಂಡಗಳಲ್ಲಿ ಪ್ರವಾಸ ಕೈಗೊಂಡು ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಕೆಲಸ ಮಾಡಲಾಗುತ್ತಿದೆ. ಈ ಮೂಲಕ ಲೋಕಸಭೆ ಚುನಾವಣೆಗೆ ಬಿಜೆಪಿ ಸಕಲ ರೀತಿಯಲ್ಲಿ ಸಿದ್ದತೆ ನಡೆಸುತ್ತಿದೆ ಎಂದು ಹೇಳಿದರು.

ಆಪರೇಷನ್ ಕಮಲವೇ ಬಿಜೆಪಿ ಸೋಲಿಗೆ ಮುಳುವಾಯ್ತು

ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಈ ರೀತಿ ಆಗಿಲ್ಲ.ಹೊಂದಾಣಿಕೆ ರಾಜಕಾರಣದ ಬಗ್ಗೆ ಬಹಿರಂಗ ಚರ್ಚೆ ಆಗ್ತಿದೆ
ಈ ರೀತಿ ಚರ್ಚೆ ಆಗ್ತಿರೋದು ದುರ್ದೈವ.ಇದು ನಾಲ್ಕು ಗೋಡೆ ಮಧ್ಯೆ ಮಾತನಾಡೋ ವಿಚಾರ ಬಹಿರಂಗ ಹೇಳಿಕೆ ಕೊಡೋ ಬಗ್ಗೆ ನಾನು ಮಾತಾಡ್ತೀನಿ ಪಕ್ಷದ ನಾಯಕರ ಜೊತೆ ಈ ಕುರಿತು ಚರ್ಚೆ ಮಾಡ್ತೀನಿ ಆಪರೇಷನ್ ಕಮಲವೇ ಬಿಜೆಪಿ ಸೋಲಿಗೆ ಮುಳುವಾಯ್ತು ಎಂದರು.

 

 

 

RELATED ARTICLES

Related Articles

TRENDING ARTICLES