ಬೆಂಗಳೂರು: ಗೃಹಬಳಕೆಯ ವಿದ್ಯುತ್‌ಗೆ 200 ಯುನಿಟ್‌ವರೆಗೆ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಂಡವರ ಸಂಖ್ಯೆ 50 ಲಕ್ಷ ದಾಟಿದೆ.
ಹೌದು, ಜೂನ್ 18ರಂದು ನೋಂದಣಿ ಪ್ರಕ್ರಿಯೆ ಆರಂಭಗೊಂಡಿತು. ಭಾನುವಾರ ಸಂಜೆ 4ರ ವರೆಗೆ 51,17,693 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.
ಗೃಹಜ್ಯೋತಿ ಯೋಜನೆ ನೋಂದಣಿ ಎಲ್ಲೆಲ್ಲಿ..?
ಗೃಹ ಜ್ಯೋತಿ ಯೋಜನೆಗೆ ವಿದ್ಯುತ್ ಕಚೇರಿ, ನಾಡಕಚೇರಿ, ಕಂಪ್ಯೂಟರ್, ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳಲ್ಲಿ ಅಧಿಕೃತ ಪೋರ್ಟಲ್ https://sevasindhugs.karnataka.gov.in ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿಯೂ ನೋಂದಾಯಿಸಿಕೊಳ್ಳಬಹುದು.
ಹೆಚ್ಚುವರಿ ಹಣಕ್ಕೆ ಯಾರಾದರೂ ಬೇಡಿಕೆಯಿಟ್ಟಲ್ಲಿ ಗ್ರಾಹಕರು 24×7 ಸಹಾಯವಾಣಿ 1912ಕ್ಕೆ ಕರೆಮಾಡಿ ತಿಳಿಸಬಹುದು.