Wednesday, January 22, 2025

ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ

ಬೆಂಗಳೂರು: 16ನೇ ವಿಧಾನಸಭೆಗೆ ಆಯ್ಕೆಯಾದ 70 ಶಾಸಕರಿಗೆ ಸಂಸದೀಯ ಕಲಾಪದ  ಬಗ್ಗೆ ಅರಿವು ಮೂಡಿಸಲು ಇಂದಿನಿಂದ ಮೂರು ದಿನಗಳ ಕಾಲ ತರಬೇತಿ ಶಿಬಿರ ನಡೆಯಲಿದೆ.

ಹೌದು,ಹೊಸದಾಗಿ ವಿಧಾನಸಭೆ (Vidhan sabha) ಪ್ರವೇಶಿಸುವ ಶಾಸಕರಿಗೆ (MLA) ಅಗತ್ಯ ತರಬೇತಿ ನೀಡುವುದು ಎಂದಿನಿಂದ ನಡೆದು ಬಂದ ವಾಡಿಕೆ. ವಿಧಾನಸಭೆಗೆ ನೂತನವಾಗಿ ಸದಸ್ಯರಿಗೆ ಬೆಂಗಳೂರಿನ (Bengaluru) ನೆಲಮಂಗಲದ ಸಮೀಪ ಇರುವ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ ಶಿಬಿರ ಆಯೋಜಿಸಲಾಗಿದೆ.

ಯು.ಟಿ.ಖಾದರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ 

ಕಾರ್ಯಕ್ರಮವು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಉದ್ಘಾಟಿಸಲಿದ್ದಾರೆ. ವಿಧಾನಸಭೆ ಸಭಾಪತಿ ಯು.ಟಿ.ಖಾದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಹೆಚ್​.ಕೆ.ಪಾಟೀಲ್ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ.ಜಾರ್ಜ್​, ವಸತಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಭಾಗಿಯಾಗಲಿದ್ದಾರೆ. ಹಾಗೇ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ, ಜಮಾತೆ ಇಸ್ಲಾಮಿ ಹಿಂದ್‌ನ ಮಹಮದ್ ಕುಂ ಸೇರಿದಂತೆ ವಿವಿಧ ಧಾರ್ಮಿಕ ಗುರುಗಳಿಂದ ಸ್ಪೂರ್ತಿದಾಯಕ ಭಾಷಣ.

ಈ ಬಾರಿ 70 ಶಾಸಕರು ತರಬೇತಿ

ಈ ಬಾರಿ ವಿಧಾನಸಭೆಗೆ ಮೊದಲಬಾರಿ ಆಯ್ಕೆಯಾಗಿರುವ ಸುಮಾರು 70 ಶಾಸಕರು ತರಬೇತಿ ಪಡೆಯಲಿದ್ದಾರೆ. ನಿನ್ನೆ (ಜೂ. 25) ರ ಸಂಜೆ ಕ್ಷೇಮವನದಲ್ಲಿ ನೂತನ ಶಾಸಕರು ಆಗಮಿಸಿ ನೋಂದಣಿ ಮಾಡಿಕೊಂಡಿದ್ದಾರೆ. ಇಂದಿನಿಂದ ಜೂ. 26ರಿಂದ ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ ಬೆಳಗ್ಗೆ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳು (ಕಾರ್ಯಕ್ರಮಗಳು) ನಡೆಯಲಿವೆ. ಬೆಳಗ್ಗೆ 10 ರಿಂದ ಸಂಜೆಯವರೆಗೆ ಹಿರಿಯ ಸದಸ್ಯರು ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ.

ಸಿದ್ದರಾಮಯ್ಯ,ಬಿ.ಎಸ್‌.ಯಡಿಯೂರಪ್ಪ,ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಸಂವಾದ

ಮೂರು ದಿನಗಳ ಕಾಲ ಪ್ರತಿದಿನ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಬಿ.ಎಸ್‌.ಯಡಿಯೂರಪ್ಪ,ಅವರೊಂದಿಗೆ ನೂತನ ಶಾಸಕರ ಜೊತೆಗೆ ಸಂವಾದ ಏರ್ಪಡಿಸಲಾಗಿದೆ.

ಶಾಸಕರ ಹಕ್ಕುಗಳು ಮತ್ತು ಕರ್ತವ್ಯಗಳು, ಶಾಸನಗಳ ರಚನೆ ಮತ್ತು ಸದಸ್ಯರ ಭಾಗವಹಿಸುವಿಕೆ, ಶೂನ್ಯವೇಳೆ, ಪ್ರಶ್ನೋತ್ತರ, ಜನಮೆಚ್ಚಿಸುವ ಶಾಸಕನಾಗುವುದು ಹೇಗೆ, ವಿಧಾನಮಂಡಲದ ಸಮಿತಿಗಳು ಮತ್ತು ಸದಸ್ಯರ ಭಾಗವಹಿಸುವಿಕೆ ಸೇರಿದಂತೆ ವಿಧಾನಮಂಡಲದ ಕಾರ್ಯಕಲಾಪಗಳು ಮತ್ತು ಶಾಸಕರ ಜವಾಬ್ದಾರಿಗಳ ಕುರಿತು ಹಿರಿಯ ಸದಸ್ಯರು ತರಬೇತಿ ಶಿಬಿರದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

 

RELATED ARTICLES

Related Articles

TRENDING ARTICLES