ಮಂಡ್ಯ: ಇಂದಿನ ದಿನಗಳಲ್ಲಿ ಮೈಸೂರು-ಬೆಂಗಳೂರು ಆಕರ್ಷಣೀಯವಾಗಿದೆ ಅಂದ್ರೆ ಅದಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪೇಗೌಡರ ಕೊಡುಗೆ ಅಪಾರವಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆರಂಭಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಸದಾ ಅವರನ್ನು ನೆನಪು ಮಾಡಿಕೊಳ್ಳುವುದು ನಮಗೆ ಹೆಮ್ಮೆ ಎನಿಸುತ್ತದೆ.ಆದರೆ ಬಹಳಷ್ಟು ಜನ ಸಮಾಜ,ಜಾತಿ ಹೀಗೆ ಅವರ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ. ಈ ಜಯಂತಿಯ ಆಚರಣೆಗೆ ಅನುವು ಮಾಡಿಕೊಟ್ಟಿದ್ದು ಕಾಂಗ್ರೆಸ್ ಪಕ್ಷ ಎಂದು ಹೇಳುವ ಮೂಲಕ ತಮ್ಮ ಬೆನ್ನು ತಟ್ಟಿಕೊಂಡರು.
ಇದನ್ನೂ ಓದಿ: ಕೆಂಪೇಗೌಡರ ಜಯಂತಿಯ ಶುಭಾಶಯ ಕೋರಿದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ
ನನ್ನ ಉಸ್ತುವಾರಿಯಲ್ಲಿ ಮಂಡ್ಯದಲ್ಲಿ ಮೊದಲ ಬಾರಿಗೆ ಜಯಂತಿ ಆಚರಿಸುತ್ತಿರುವುದು ಸಂತಸ ನೀಡುತ್ತಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಈ ಜಯಂತಿಯ ಆಚರಣೆ ಜಾರಿಗೆ ಬಂದಿದೆ ಎಂದ ಅವರು ಎಂದು ಹರ್ಷ ವ್ಯಕ್ತಪಡಿಸಿದರು.
ಇನ್ನೂ ಬೆಂಗಳೂರಿನ ಏರ್ಪೋರ್ಟ್ ನಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಿಸಿದ್ದು ಬಿಜೆಪಿ ಎಂಬ ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು
ಬೆಂಗಳೂರು ಅಂತರಾಷ್ಟ್ರೀಯ ಏರ್ ಪೋರ್ಟ್ ಗೆ ಕೆಂಪೇಗೌಡರ ಹೆಸರಿಟ್ಟಿದ್ದು ಯಾರೆಂದು? ಪ್ರಶ್ನಿಸಿದರು.
ಕಾಂಗ್ರೆಸ್ ಪಕ್ಷದ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗಲೇ ಹೆಸರಿಡಲಾಗಿತ್ತೆಂದು ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದರು.
ಅಲ್ಲದೆ ಏರ್ ಪೋರ್ಟ್ ಗೆ ಹೆಸರಿಟ್ಟ ಮೇಲೆ ಪ್ರತಿಮೆ ನಿರ್ಮಿಸಲೇಬೇಕು ಅದು ಅನಿವಾರ್ಯವಾಗಿರುತ್ತದೆ.ಯಾರೇ ಆಗಿದ್ದರೂ ಪ್ರತಿಮೆ ನಿರ್ಮಾಣ ಮಾಡುತ್ತಿದ್ದರು ಎಂದರು.