Monday, December 23, 2024

ಹಾಸನದಲ್ಲಿ ಭೂಮಿ ಕಂಪಿಸಿದ ಅನುಭವ : ಮನೆಯಿಂದ ಹೊರಗೆ ಹೆದರಿ ಬಂದ ಜನ

ಹಾಸನ: ಹಾಸನದ (Hassan) ವಿವಿಧೆಡೆ ಇಂದು ಬೆಳಗ್ಗೆ ಭೂಮಿ ಕಂಪಿಸಿದ (Earthquake) ಅನುಭವ ಆಗಿದೆ. ಇದರಿಂದ ಗಾಬರಿಗೊಂಡ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಹಾಸನದ ಅರಕಲಗೂಡು ಪಟ್ಟಣದಲ್ಲಿ ಇಂದು ಬೆಳಿಗ್ಗೆ 10.25 ರ ವೇಳೆಗೆ ಪಟ್ಟಣದ ಹಲವು ಪ್ರದೇಶಗಳಲ್ಲಿ ಭೂಮಿಯು ಕಂಪಿಸಿದ ಅನುಭವವಾಗಿದೆ. ಇನ್ನೂ ಕೆಲವು ಕಡೆ 10:34ರ ಸಮಯದಲ್ಲಿ ಭೂಮಿ ಕಂಪಿಸಿದೆ. ಘಟನೆಯಿಂದ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೇ ಭೂಕಂಪದ ಭಯದಿಂದ ಜನರು ಮನೆಯ ಒಳಗೆ ಹೋಗದೆ ಹೊರಗೆ ನಿಂತಿದ್ದಾರೆ.

ಇದನ್ನೂ ಓದಿ: ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಸಂಚಾರದ ಟ್ರೈನ್ ಟೈಮಿಂಗ್ಸ್, ಟಿಕೆಟ್​ ದರದ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ

ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಕಂಪನಕ್ಕೆ ಕಾರಣ ಏನು? ಕಂಪನದ ತೀವ್ರತೆ ಹಾಗೂ ಬೇರೆ ಏನಾದರೂ ಕಾರಣ ಇದೆಯೇ ಎಂದು ಪರಿಶೀಲನೆ ನಡೆಸುತ್ತಿದ್ದಾರೆ.

 

 

RELATED ARTICLES

Related Articles

TRENDING ARTICLES