Saturday, August 23, 2025
Google search engine
HomeUncategorizedಕೆಂಪೇಗೌಡರ ಜಯಂತಿಯ ಶುಭಾಶಯ ಕೋರಿದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ 

ಕೆಂಪೇಗೌಡರ ಜಯಂತಿಯ ಶುಭಾಶಯ ಕೋರಿದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ 

ಬೆಂಗಳೂರು: ಇಂದು 514ನೇ ಕೆಂಪೇಗೌಡರ ಜಯಂತಿಯ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿಯವರು  ‘ನಾಡಿನ ಸಮಸ್ತ ಜನತೆಗೆ, ಜಗತ್ತಿನೆಲ್ಲೆಡೆ ನೆಲೆಸಿರುವ ಕನ್ನಡಿಗರೆಲ್ಲರಿಗೂ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯ ಶುಭಾಶಯಗಳು ಎಂದು ಟ್ವೀಟ್​ ಮೂಲಕ ಶುಭಾಶಯ ಕೋರಿದ್ದಾರೆ.

ಹೌದು, ಅವರು ಸಾಮಾಜಿಕ ಜಾಲತಾಣಲ್ಲಿ ನಾಡಪ್ರಭುಗಳು ಬೆಂಗಳೂರಿನ ನಿರ್ಮಾತೃ, ಅಪ್ರತಿಮ ಆಡಳಿತಗಾರರಷ್ಟೇ ಆಗಿರಲಿಲ್ಲ. ಅವರೊಬ್ಬರು ಅನನ್ಯ ದಾರ್ಶನಿಕರು, ಶಾಂತಿಪ್ರಿಯರು, ಸರ್ವಜನರ ಶ್ರೇಯಸ್ಸಿಗಾಗಿ ದುಡಿದ ಮಹಾನ್ ಮಾನವತಾವಾದಿ.

ಇದನ್ನೂ ಓದಿ: 135 ಸೀಟು ಸಿಕ್ಕ ಮೇಲೆ ಪ್ರಣಾಳಿಕೆ ಪುಸ್ತಕ ಗೆದ್ದಲು ಹಿಡಿಯಿತೇ? : ಹೆಚ್.ಡಿ ಕುಮಾರಸ್ವಾಮಿ

ಅಭಿವೃದ್ಧಿ, ಶಾಂತಿ, ಸೌಹಾರ್ದತೆ, ನಗರಾಭಿವೃದ್ಧಿ, ನೀರಾವರಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನಾಡಪ್ರಭುಗಳು ಹಾಕಿಕೊಟ್ಟ ಹಾದಿಯಲ್ಲಿ ಸಾಗೋಣ. ಅವರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಬದ್ಧತೆಯಿಂದ ಶ್ರಮಿಸೋಣ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. 

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments