Sunday, December 22, 2024

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಸಿ.ವಿ. ಶಿವಶಂಕರ್​ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಸಿ.ವಿ. ಶಿವಶಂಕರ್​ ಅವರು ಇಂದು ಹೃದಯಾಘಾತ ನಿಧನರಾಗಿದ್ದಾರೆ.

ಬಾಲನಟನಾಗಿ ರಂಗಭೂಮಿಗೆ ಪ್ರವೇಸಿದ ಸಿ.ವಿ. ಶಿವಶಂಕರ್​ ಅವರಿಗೆ 90 ವರ್ಷ ವಯಸ್ಸಾಗಿತ್ತು. ಚಿತ್ರ ಸಾಹಿತಿಯಾಗಿಯೂ ಸಿ.ವಿ. ಶಿವಶಂಕರ್​ ಗುರುತಿಸಿಕೊಂಡಿದ್ದರು. ‘ಸಿರಿವಂತನಾದರೂ ಕನ್ನಡ ನಾಡಲ್ಲಿ ಮೆರೆವೆ..’ ಹಾಡನ್ನು ಬರೆಯುವ ಮೂಲಕ ಅಪಾರ ಜನಪ್ರಿಯತೆ ಕೂಡ ಪಡೆದುಕೊಂಡಿದ್ದರು.

‘ಯಾವುದೇ ಗಂಭೀರವಾದ ಆರೋಗ್ಯ ಸಮಸ್ಯೆ ಅವರಿಗೆ ಇರಲಿಲ್ಲ. ಮಧ್ಯಾಹ್ನ ಊಟ ಮುಗಿಸಿದರು. ಪೂಜೆ ಮಾಡಿದ ಬಳಿಕ ಹಾರ್ಟ್​ ಅಟ್ಯಾಕ್​ ಆಯಿತು’ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅವರು ಬದುಕು ಉಳಿಯಲಿಲ್ಲ. ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಅನೇಕ ನಾಟಕಗಳಲ್ಲಿ ಅಭಿನಯಿಸಿ ನಂತರ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ‘ಸ್ಕೂಲ್ ಮಾಸ್ಟರ್​’, ‘ಕೃಷ್ಣ ಗಾರುಡಿ’, ‘ರತ್ಮಮಂಜರಿ’, ‘ರತ್ನಗಿರಿ ರಹಸ್ಯ’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಹಲವು ನಿರ್ದೇಶಕರ ಜೊತೆ ಸಹಾಯಕರಾಗಿ ಅನುಭವ ಪಡೆದ ಬಳಿಕ ‘ಮನೆ ಕಟ್ಟಿ ನೋಡು’ ಸಿನಿಮಾವನ್ನು ಸ್ವತಂತ್ರವಾಗಿ ನಿರ್ದೇಶಿಸಿದ್ದರು.

ಸಿ.ವಿ. ಶಿವಶಂಕರ್​ (C V Shivashankar) ಅವರ ನಿಧನಕ್ಕೆ ಚಿತ್ರರಂಗದವರು ಸಂತಾಪ ಸೂಚಿಸುತ್ತಿದ್ದಾರೆ.

 

 

 

 

RELATED ARTICLES

Related Articles

TRENDING ARTICLES