ಬೆಂಗಳೂರು: ಏಕಕಾಲಕ್ಕೆ 5 ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿಯವರು ಮಧ್ಯಪ್ರದೇಶದ ಭೋಪಾಲ್ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಚಾಲನೆ ನೀಡಿದ್ದರು
ಹೌದು, ಇಂದು ಧಾರವಾಡ-ಬೆಂಗಳೂರು ಸೇರಿದಂತೆ ಒಟ್ಟು 5 ವಂದೇ ಭಾರತ್ ರೈಲುಗಳಿಗೆ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಇದನ್ನೂ ಓದಿ: ಹೈ ಸ್ಪೀಡ್ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಭೋಪಾಲ್ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ 1) ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು, 2) ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್,3) ಮಡಗಾಂವ್(ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್,4) ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು,5) ಹತಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಏಕಕಾಲದಲ್ಲಿ ಚಾಲನೆ ನೀಡಿದ್ದಾರೆ.
ರಾಜ್ಯದೊಳಗೆ ಸಂಚರಿಸಲಿರುವ ಮೊದಲ ವಂದೇ ಭಾರತ್ ರೈಲು
ಈಗಾಗಲೇ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದು, ರಾಜ್ಯದೊಳಗೆ ಸಂಚರಿಸಲಿರುವ ಮೊದಲ ವಂದೇ ಭಾರತ್ ರೈಲು ಇದಾಗಿದೆ. ಇನ್ನು ಧಾರವಾಡದಲ್ಲಿ ರಾಜ್ಯಪಾಲ ಗೆಹ್ಲೋಟ್, ಕೇಂದ್ರ ಸಚಿವ ಜೋಶಿ ಹಸಿರು ನಿಶಾನೆ ತೋರಿಸಿದ್ದಾರೆ. ವಾರದಲ್ಲಿ 6 ದಿನ ಧಾರವಾಡ-ಬೆಂಗಳೂರು ಮಾರ್ಗದಲ್ಲಿ ಸಂಚಾರ ಮಾಡಲಿದೆ.
ಈ ವೇಳೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಉಪಸ್ಥಿತರಿದ್ದರು.
Madhya Pradesh: PM Modi flags off 5 Vande Bharat Express trains
Read @ANI Story | https://t.co/9MpOKds51I#PMModi #VandeBharatExpress #MadhyaPradesh #RaniKamalapatiJabalpur #AshwiniVaishnaw pic.twitter.com/RBl4c7tSe4
— ANI Digital (@ani_digital) June 27, 2023