Sunday, May 19, 2024

ಹೈ ಸ್ಪೀಡ್ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ

ಬೆಂಗಳೂರ : ರಾಜ್ಯದ ಜನರ ಬಹುನಿರೀಕ್ಷಿತ ಕನಸಾಗಿದ್ದ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯುಳ್ಳ ರೈಲು ಯೋಜನೆಯಾಗಿರುವ ವಂದೇ ಭಾರತ್ ಎಕ್ಸ್ ಪ್ರೇಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಹಸಿರು ನಿಶಾನೆ ತೋರಿದ್ದಾರೆ.

ದೇಶಾದ್ಯಂತ ಏಕಕಾಲದಲ್ಲಿ 5 ರೈಲುಗಳಿಗೆ ಚಾಲನೆ ನೀಡಿರುವ ಮೋದಿಯವರು ರಾಜ್ಯದ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಿದ್ದಾರೆ. ಜನರಿಗೆ ವೇಗದ ಪ್ರಯಾಣದ ಜೊತೆಗೆ ಸುರಕ್ಷಿತ ಪ್ರಯಾಣಕ್ಕೂ ಒತ್ತು ನೀಡಿರುವ ವಿಶೇಷ ಯೋಜನೆ ಇದಾಗಿದ್ದು, ಸಮಯದ ಉಳಿತಾಯಕ್ಕೂ ಸಹಕಾರಿಯಾಗಲಿದೆ.

ಇದನ್ನೂ ಓದಿ: ಏಕಕಾಲಕ್ಕೆ 5 ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

ದೇಶಾದ್ಯಂತ ಏಕಕಾಲದಲ್ಲಿ 5 ರೈಲುಗಳಿಗೆ ಚಾಲನೆ

1) ರಾಣಿ ಕಮಲಾಪತಿ-ಜಬಲ್ಪುರ್​​​​​ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು,

2) ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್,

3) ಮಡಗಾಂವ್(ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್,

4) ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು,

5) ಹತಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಏಕಕಾಲದಲ್ಲಿ ಚಾಲನೆ ನೀಡಿದ್ದಾರೆ.

ರಾಜ್ಯದೊಳಗೆ ಸಂಚರಿಸಲಿರುವ ಮೊದಲ ವಂದೇ ಭಾರತ್ ರೈಲು

ಈಗಾಗಲೇ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದು, ರಾಜ್ಯದೊಳಗೆ ಸಂಚರಿಸಲಿರುವ ಮೊದಲ ವಂದೇ ಭಾರತ್ ರೈಲು ಇದಾಗಿದೆ. ಇನ್ನು ಧಾರವಾಡದಲ್ಲಿ ರಾಜ್ಯಪಾಲ ಗೆಹ್ಲೋಟ್​​, ಕೇಂದ್ರ ಸಚಿವ​​ ಜೋಶಿ ಹಸಿರು ನಿಶಾನೆ ತೋರಿಸಿದ್ದಾರೆ. ವಾರದಲ್ಲಿ 6 ದಿನ ಧಾರವಾಡ-ಬೆಂಗಳೂರು ಮಾರ್ಗದಲ್ಲಿ ಸಂಚಾರ ಮಾಡಲಿದೆ.

ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ,ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಇತರ ಗಣ್ಯರು ಬೆಂಗಳೂರು-ಧಾರವಾಡ ನಡುವೆ ಸಂಚರಿಸುವ ರೈಲಿಗೆ ಚಾಲನೆ ನೀಡಿದರು.

RELATED ARTICLES

Related Articles

TRENDING ARTICLES