Wednesday, January 22, 2025

ಅಮಿತ್ ಮಾಳವೀಯಾ ವಿರುದ್ದ ಎಫ್​ಐಆರ್​ ದಾಖಲು

ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್​ ಗಾಂಧಿ (Rahul Gandhi) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪ ಮೇಲೆ ಬಿಜೆಪಿ(BJP) ಐಟಿ ಸೆಲ್​ ಮುಖ್ಯಸ್ಥ ಅಮಿತ್ ಮಾಳವಿಯಾ(Amit Malviya) ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಹೌದು, ರಾಹುಲ್ ಗಾಂಧಿ ವಿರುದ್ಧ ಅಮಿತ್ ಮಾಳವಿಯಾ ಅವರು ಅವಹೇಳನಕಾರಿ ಪೋಸ್ಟ್ ಮಾಡಿದ್ದು, ಇವರ ವಿರುದ್ಧ ಕ್ರಮಕೈಗೋಳ್ಳುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಹೈಗ್ರೌಂಡ್ಸ್ ಠಾಣೆಗೆ ಜೂನ್ 17ರಂದು ದೂರು ನೀಡಿದ್ದರು.

ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಇದರ ಆಧಾರದ ಮೇಲೆ ಇದೀಗ ಅಮಿತ್ ಮಾಳವಿಯಾ ವಿರುದ್ಧ ಹೈಗ್ರೌಂಡ್ಸ್ ಠಾಣೆ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ಗ್ಯಾರೆಂಟಿ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗರಿಗಿಲ್ಲ : ಕಿಮ್ಮನೆ ರತ್ನಾಕರ್

‘ಅಮಿತ್ ಮಾಳವೀಯ ಅವರು ಹಂಚಿಕೊಂಡಿದ್ದ ವೀಡಿಯೊದಲ್ಲಿ ರಾಹುಲ್ ಗಾಂಧಿಯನ್ನು ದುರುದ್ದೇಶಪೂರಿತ 3ಡಿ ಅನಿಮೇಟೆಡ್ ವೀಡಿಯೋ ಮೂಲಕ ಅವಮಾನಿಸಲಾಗಿದೆ. ಇದನ್ನು ಬಿಜೆಪಿಯ ಪ್ರಮುಖ ನಾಯಕರಾದ ಜೆಪಿ ನಡ್ಡಾ ಮತ್ತು ಅರುಣ್ ಸೂದ್ ಅನುಮೋದಿಸಿದ್ದಾರೆ’ ಎಂದು ಪ್ರಿಯಾಂಕ್ ಖರ್ಗೆ ದೂರಿನಲ್ಲಿ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದರು.

ರಾಹುಲ್ ಗಾಂಧಿ ಮತ್ತು INCಯ ಪ್ರತಿಷ್ಠೆಗೆ ಕಳಂಕ ತರುವ ಉದ್ದೇಶ

‘ವಿಡಿಯೋವನ್ನು ಜೂನ್ 17, 2023 ರಂದು ಮಾಳವೀಯಾ ಅವರ ಟ್ವಿಟರ್‌ ಖಾತೆಯಲ್ಲಿ ರಾಹುಲ್ ಗಾಂಧಿ ಮತ್ತು INCಯ ಪ್ರತಿಷ್ಠೆಗೆ ಕಳಂಕ ತರುವ ಉದ್ದೇಶದಿಂದ ಅಪಲೋಡ್‌ ಮಾಡಲಾಗಿದೆ. ಈ ವಿಡಿಯೋದಲ್ಲಿ ಕಾಂಗ್ರೆಸ್ ಮತ್ತು ಅದರ ನಾಯಕರನ್ನು ದೇಶವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಕೋಮು ವೈಷಮ್ಯವನ್ನು ಪ್ರಚೋದಿಸಲು ಮತ್ತು ಪಕ್ಷ ಮತ್ತು ಅದರ ನಾಯಕರ ವ್ಯಕ್ತಿತ್ವವನ್ನು ತಪ್ಪಾಗಿ ನಿರೂಪಿಸುತ್ತದೆ. ಎಂದು ಆರೋಪಿಸಿದ್ದಾರೆ.

ರಾಹುಲ್ ಗಾಂಧಿಯವರ ಸಂವಹನದ ಅನಿಮೇಟೆಡ್ ವಿಡಿಯೋ

ಜನರೊಂದಿಗೆ ರಾಹುಲ್ ಗಾಂಧಿಯವರ ಸಂವಹನದ ಅನಿಮೇಟೆಡ್ ವಿಡಿಯೋವನ್ನು ತಪ್ಪಾಗಿ ನಿರೂಪಿಸಲಾಗಿದೆ.ವೀಡಿಯೋದ ಆತಂಕಕಾರಿ ಅಂಶವೆಂದರೆ ಇಸ್ಲಾಮಿಕ್ ನಂಬಿಕೆಯುಳ್ಳ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದರು.

 

RELATED ARTICLES

Related Articles

TRENDING ARTICLES