ಬೆಂಗಳೂರು : ಈಗಲೇ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು,ರಾಜ್ಯದ ಕರಾವಳಿ ವ್ಯಾಪ್ತಿಯಲ್ಲಿ ಮಳೆ ಮುಂದುವರಿದಿದೆ. ಇನ್ನೂ ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದ್ದು, ಈ ಜಿಲ್ಲೆಗೆ ಜೂನ್ 28ರಿಂದ ಜುಲೈ 1ರ ತನಕ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಇದನ್ನೂ ಓದಿ: Karnataka Rains : ಕರಾವಳಿಯಲ್ಲಿ ಮುಂದುವರೆದ ವರುಣನ ಅಬ್ಬರ
ಕರಾವಳಿ ವ್ಯಾಪ್ತಿಯಲ್ಲಿ ಬಿರುಗಾಳಿಯು ವೇಗದಲ್ಲಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೂಚಿಸಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು,
ಸಂಜೆ ಅಥವಾ ರಾತ್ರಿ ವೇಳೆ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹೇಳಿದೆ.