Wednesday, January 22, 2025

ನಾನು ಕೂಡ ಎಂಪಿ ಚುನಾವಣೆಯ ಪ್ರಬಲ ಆಕಾಂಕ್ಷಿ : ಎಂ.ಪಿ ರೇಣುಕಾಚಾರ್ಯ

ದಾವಣಗೆರೆ : ನಾನು ಕೂಡ ಎಂಪಿ ಚುನಾವಣೆ(ದಾವಣಗೆರೆ ಲೋಕಸಭಾ ಕ್ಷೇತ್ರ)ಯ ಪ್ರಬಲ ಆಕಾಂಕ್ಷಿ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಹೇಳಿದರು.

ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಕಡೆ ನನಗೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿ ಅಂತ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕರ್ತರು, ಜನರ ಒತ್ತಡ ಹೆಚ್ಚಾದ ಕಾರಣ ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಕೂಡ ಜಿ.ಎಂ ಸಿದ್ದೇಶ್ವರ್ ಅವರಿಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಅಂತ ಘೋಷಣೆ ಮಾಡಿದ್ದಾರೆ. ನಾನು ಕೂಡ ಪ್ರಬಲ ಆಕಾಂಕ್ಷಿ ಎಂದು ದಾಳ ಉರುಳಿಸಿದರು.

ಇದನ್ನೂ ಓದಿ : ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಇಳಿಸಿ ಮೂಲೆಗುಂಪು ಮಾಡಿದ್ದಾರೆ : ದಿನೇಶ್ ಗುಂಡೂರಾವ್

ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಸಮರ್ಥ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಸಮರ್ಥನಿದ್ದೇನೆ. ಶಾಸಕನಾಗಿ, ಸಚಿವನಾಗಿ ಅನುಭವ ಇದೆ. ಆದರೆ, ಅಧ್ಯಕ್ಷ ಸ್ಥಾನಕ್ಕಾಗಿ ಒತ್ತಡ ಹಾಕುವುದಿಲ್ಲ. ಮಾಜಿ ಸಚಿವ ವಿ. ಸೋಮಣ್ಣ ಅವರು ರಾಜ್ಯಾಧ್ಯಕ್ಷ ಸ್ಥಾನ ಕೇಳಿದ್ದು ನನಗೆ ಗೊತ್ತಿಲ್ಲ ಎಂದು ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆಯೂ ರೇಣುಕಾಚಾರ್ಯ ಇಂಗಿತ ವ್ಯಕ್ತಪಡಿಸಿದರು.

ಹಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜೈಲಿಗೆ ಕಳುಹಿಸಿದರು. ಮಾಡಾಳ್ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ಕೊಡಬೇಕಿತ್ತು. ಅಲ್ಲಿ ಕೂಡ ತಪ್ಪು ಮಾಡಿದ್ರು. ನಮ್ಮ ಶಾಸಕರನ್ನು ಜೈಲಿಗೆ ಕಳುಹಿಸಿದ್ದಾರೆ. ಮಾಡಾಳ್ ಪುತ್ರನಿಗೂ ಕೂಡ ಟಿಕೆಟ್ ನೀಡಿದೆ ತಪ್ಪು ಮಾಡಿದ್ದಾರೆ ಎಂದು ಸ್ವಪಕ್ಷದ ವಿರುದ್ಧವೇ ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದರು.

RELATED ARTICLES

Related Articles

TRENDING ARTICLES