Thursday, August 28, 2025
HomeUncategorizedLokayukta Raid : ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್‌..!

Lokayukta Raid : ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್‌..!

ಬೆಂಗಳೂರು : ರಾಜ್ಯಾದ್ಯಂತ ಕೃಷಿ ಇಲಾಖೆಯ ಅಧಿಕಾರಿಗಳ ಮನೆಯ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ಮಾಡಿದೆ.

ಹೌದು, ಬಾಗಲಕೋಟೆ,ವಿಜಯಪುರ,ಶಿವಮೊಗ್ಗ,ಕೋಲಾರ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಯಾದಗಿರಿ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ(Karnataka Lokayukta raid) ಮಾಡಿದ್ದಾರೆ.

ಬಾಗಲಕೋಟೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ

ಬಾಗಲಕೋಟೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ್ ಅಧಿಕಾರಿ,ಕೃಷ ಶಿರೂರ ಮನೆ ಮೇಲೆ
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ವಿದ್ಯಾಗಿರಿಯಲ್ಲಿರುವ ನಿವಾಸಗಳಲ್ಲಿ ಪರಿಶೀಲನೆಯನ್ನು DySP ಶಂಕರ ರಾಗಿ, ಪುಷ್ಪಲತಾ ನೇತೃತ್ವದಲ್ಲಿ ರೇಡ್ ಮಾಡಲಾಗಿದೆ.

ವಿಜಯಪುರ ನಗರದ ಮೇಲೆ ಲೋಕಾ ದಾಳಿ 

ವಿಜಯಪುರದಲ್ಲಿ 4 ಕಡೆ ದಾಳಿ ಮಾಡಲಾಗಿದ್ದು, PWD ಇಲಾಖೆ ಜೆಇ, ಸಂಬಂಧಿ ಮನೆ ಮೇಲೆ,
ಜೆಇ ಭೀಮನಗೌಡ ಬಿರಾದಾರ ನಿವಾಸ ಸಂಬಂಧಿ ಶ್ರೀಕಾಂತ್ ಅಂಗಡಿ ಮನೆ ಮೇಲೆ ದಾಳಿ
ಭೀಮನಗೌಡ ಬಿರಾದಾರ ಮನೆಯಲ್ಲಿ ಪರಿಶೀಲನೆ ಬಸವನ ಬಾಗೇವಾಡಿ ವಿಭಾಗದಲ್ಲಿ ಪ್ರಭಾರಿ AEE
ಆರ್‌ಟಿಒ ಕಚೇರಿ ಹಿಂಭಾಗದಲ್ಲಿರುವ ಮನೆ AEE ಜೆಪಿ ಶೆಟ್ಟಿ ಮನೆ ಮೇಲೆ ವಿಜಯಪುರ ಲೋಕಾಯುಕ್ತ ಎಸ್ಪಿ ಅನಿತಾ ಹದ್ದನ್ನವರ ನೇತೃತ್ವದಲ್ಲಿ ದಾಳಿ ಮಾಡಲಿಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ

ಶಿವಮೊಗ್ಗ ಜಿಲ್ಲೆಯಲ್ಲಿ ಪುರಸಭೆ ಸಿಬ್ಬಂದಿ ಖಾತೆ ಬದಲಾವಣೆಗೆಗಾಗಿ 15 ಸಾವಿರ ಲಂಚ ಸ್ವೀಕಾರ
ಲಂಚ ಸ್ಪೀಕರಿಸುತ್ತಿದ್ದಾಗ ಚಂದ್ರಕಲಾ ಮಂಜುನಾಥ್ ಶೆಟ್ಟಿ ಅನ್ನೋರಿಂದ ಲಂಚ ಸ್ವೀಕಾರ ಮಾಡುತ್ತಿದ್ದಾಗ
DySP ಉಮೇಶ್‌ ಈಶ್ವರ್ ನಾಯ್ಕ ನೇತೃತ್ವದಲ್ಲಿ ರೇಡ್ ಹಣ ವಶಕ್ಕೆ ಪಡೆದು ಕೇಸ್‌ ದಾಖಲಿಸಿಕೊಂಡಿದ್ದಾರೆ.

ತುಮಕೂರಿನಲ್ಲಿ ಕೃಷಿ ಇಲಾಖೆ ಜೆಡಿ ರವಿ ನಿವಾಸದ ಮೇಲೆ ರೇಡ್

ತುಮಕೂರು ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ರವಿ ಅವರ ನಿವಾಸ ಹಾಗೂ ಫಾರಂ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಶಂಕರಪುರದಲ್ಲಿರುವ ನಿವಾಸ ಹಾಗೂ ರಾಮನಗರದ ಫಾರಂ ಹೌಸ್ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆಯಲ್ಲಿ ತೊಡಗಿದ್ದಾರೆ. ತುಮಕೂರು ಕೃಷಿ ಇಲಾಖೆಯಲ್ಲಿ ಜೆಡಿ ಆಗಿ ಕೆಲಸ ನಿರ್ವಹಿಸುತ್ತಿರುವ ರವಿ, ಹಾಸನದಿಂದ ತುಮಕೂರಿಗೆ ವರ್ಗಾವಣೆಯಾಗಿದ್ದರು.

ಬೆಳಗಾವಿ ನಗರದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಬೆಳಗಾವಿ ನಗರದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಹೆಸ್ಕಾಂ ‌ಕಾರ್ಯನಿರ್ವಾಹಕ ಇಂಜಿನಿಯರ್ ಶೇಖರ್ ಬಹುರೂಪಿ ಮನೆ ಮೇಲೆ ದಾಳಿ ಮಾಡಲಾಗಿದೆ. ಸದ್ಯ ಶೇಖರ್ ಬಹುರೂಪಿ ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಶೇಖರ್ ಬಹುರೂಪಿ ಅವರು 2019ರಲ್ಲಿ ಅಥಣಿಯಲ್ಲಿ ಕಾರ್ಯನಿರ್ವಹಿಸುವಾಗ ಪ್ರವಾಹದ ಸಂದರ್ಭದಲ್ಲಿ ನಡೆದ ಅವ್ಯವಹಾರ ಸಂಬಂಧ ಅಮಾನತುಗೊಂಡಿದ್ದರು.

ಬೆಂಗಳೂರಿನ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರಿನ ಹಲವೆಡೆ ಲೋಕಾಯುಕ್ತ ದಾಳಿಯಾಗಿದೆ. ಕೆ.ಆರ್​​.ಪುರಂ ತಹಶೀಲ್ದಾರ್​ ಅಜಿತ್​​ ರೈ ಮನೆ ಸೇರಿದಂತೆ 10 ಕಡೆ ಲೋಕಾಯುಕ್ತ ದಾಳಿ ಮಾಡಿದ್ದು, ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಅಜಿತ್ ಮನೆಯಲ್ಲಿ ಲಕ್ಷಾಂತರ ರೂ. ನಗದು ಪತ್ತೆಯಾಗಿದೆ. ಅಜಿತ್ ಕೆಲ ದಿನಗಳ ಹಿಂದೆ ಕೆ.ಆರ್​.ಪುರಂನಿಂದ ವರ್ಗಾವಣೆಯಾಗಿದ್ದ . ಇವರ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಕೆ.ಆರ್ ಪುರದಿಂದ ವರ್ಗಾವಣೆ
ತಹಶೀಲ್ದಾರ್ ಮನೆಯಲ್ಲಿ 10ಲಕ್ಷಕ್ಕೂ ಹೆಚ್ಚು ನಗದು ಪತ್ತೆ ಮಾಡಲಾಗಿದೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments