Wednesday, January 22, 2025

Rishab Shetty: ಅಮೆರಿಕದಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ’ 2023 ಪ್ರಶಸ್ತಿ

ವಾಷಿಂಗ್ಟನ್ ಡಿಸಿ: 2022ರಲ್ಲಿ ಇತಿಹಾಸವನ್ನು ಸೃಷ್ಟಿಸಿದ ಕನ್ನಡ ಸೊಗಡಿನ ‘ಕಾಂತಾರ’(Kantara) ಚಿತ್ರವನ್ನು ನಿರ್ದೇಶಿಸಿ ದೇಶ ವಿದೇಶದಲ್ಲಿ ಜನಪ್ರಿಯತೆ ಗಳಿಸಿದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ರಿಷಬ್ ಶೆಟ್ಟಿ(Rishab Shetty) ಅವರಿಗೆ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ಇತ್ತೀಚೆಗೆ ಅಮೆರಿಕ ಕನ್ನಡಿಗರು ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪ್ರದಾನ ಮಾಡಿದ್ದರು.

ಹೌದು, ಡಿವೈನ್​ ಸ್ಟಾರ್ ರಿಷಬ್ ಶೆಟ್ಟಿ ತಮ್ಮ ಪತ್ನಿ ಪ್ರಗತಿ ಶೆಟ್ಟಿ ಜೊತೆಗೂಡಿ ವಾಷಿಂಗ್ಟನ್‌ ನಗರದ ಪ್ಯಾರಾಮೌಂಟ್ ಥಿಯೇಟರ್ ಗೆ ತೆರಳಿ ಪ್ರಶಸ್ತಿ ಸ್ವೀಕರಿಸಿದರು.ಇದೇ ಸಂದರ್ಭದಲ್ಲಿ ಅಮೇರಿಕಾದ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದ ಅವರು ವಾಷಿಂಗ್ಟನ್ ನ ಸಿಯಾಟಲ್ ನಗರದ ಪ್ಯಾರಾಮೌಂಟ್ ಥಿಯೇಟರ್ ಗೆ 95 ವರ್ಷಗಳ ಇತಿಹಾಸವಿದೆ‌. ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಸಾಕಷ್ಟು ಗಣ್ಯರು ಈ ಸ್ಥಳದಲ್ಲಿ ಭಾಷಣ ಮಾಡಿದ್ದರೆ‌. ಅನೇಕ ಹೆಸರಾಂತ ಕಲಾವಿದರ ಕಾರ್ಯಕ್ರಮಗಳು ಇಲ್ಲಿ ನಡೆದಿದೆ‌. ಇಂತಹ ಇತಿಹಾಸವಿರುವ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ಪಡೆದಿರುವುದಕ್ಕೆ ರಿಷಬ್ ಶೆಟ್ಟಿ ಸಂತಸಪಟ್ಟಿದ್ದಾರೆ.

ಇದನ್ನೂ ಓದಿ: ಹೊಸ ಸ್ಟುಡಿಯೋಸ್​ ಆರಂಭಿಸಿದ ರಿಷಬ್​ ಶೆಟ್ಟಿ

ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್​ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.

ಅಮೇರಿಕಾ ಹಾಗೂ ವಾಷಿಂಗ್ಟನ್ ನಗರಕ್ಕೆ ಕನ್ನಡಿಗರು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿದ ಟ್ರಸ್ಫರ್ಡ್ ಅವರು, ರಿಷಬ್ ಶೆಟ್ಟಿ ಅವರ “ಕಾಂತಾರ” ಸಿನಿಮಾವನ್ನು ಯುನಿವರ್ಸಲ್‌ ಸಿನಿಮಾ ಎಂದು ಮುಕ್ತಕಂಠದಿಂದ ಶ್ಲಾಘಿಸಿದರು.  ಚಿನ್ನದ ಲೇಪನ ಹೊಂದಿರುವ ಈ ಟ್ರೋಫಿ, ಸುಮಾರು ಐದು ಕೆಜಿ ತೂಕವಿದೆ. 1800 ಕ್ಕೂ ಅಧಿಕ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಬಿಳಿ ಪಂಚೆಯಲ್ಲಿ ಮಿಂಚಿದ ಕುಂದಾಪ್ರ ಶೆಟ್ರು

ಪ್ಯಾಂಟ್ ಬದಲಿಗೆ ಪಂಚೆ ಸಾಮಾನ್ಯವಾಗಿ ಕರಾವಳಿ ಕನ್ನಡಿಗ ಪುರುಷರ ಅಚ್ಚುಮೆಚ್ಚಿನ ಉಡುಪು. ಸಮಾರಂಭಗಳಲ್ಲಿ ಸಾಮಾನ್ಯವಾಗಿ ಪಂಚೆಗಳನ್ನೇ ಧರಿಸುತ್ತಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ಅವರು ಸಿನಿಮಾ ಸಮಾರಂಭಗಳಿಗೆ ಧರಿಸುವ ಪಂಚೆ ಬಹುತೇಕರ ಫೇವರಿಟ್ ಆಗಿದೆ.

ರಿಷಬ್ ಶೆಟ್ಟಿಯವರು ದೊಡ್ಡ ದೊಡ್ಡ ಸಮಾರಂಭಗಳಲ್ಲಿ ಪಂಚೆ ಧರಿಸಿ ಮಿಂಚುವುದುಂಟು. ವಿಶ್ವ ಶ್ರೇಷ್ಟ ಕನ್ನಡಿಗ ಪ್ರಶಸ್ತಿ ಸ್ವೀಕರಿಸಲು ಅಮೆರಿಕಕ್ಕೂ ಪಂಚೆ ಧರಿಸಿಕೊಂಡೇ ಹೋಗಿದ್ದಾರೆ.

 

 

 

RELATED ARTICLES

Related Articles

TRENDING ARTICLES