Friday, November 22, 2024

ಅಕ್ರಮ ಆಸ್ತಿ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅರೆಸ್ಟ್

ಬೆಂಗಳೂರು: ನಿನ್ನೆ ಬೆಳಂ ಬೆಳ್ಳಗ್ಗೆ ರಾಜದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಗಳ ಮನೆಯ ಮೇಲೆ ದಾಳಿ ಮಾಡಿದ್ದರು.ದಾಳಿ ಮಾಡಿದವರ ಪೈಕಿ ಬೆಂಗಳೂರಿನ ಕೆಆರ್ ಪುರ ತಹಶೀಲ್ದಾರ್ ಅಜಿತ್ ಮನೆಯ ಮೇಲೆ ಕೂಡ ಪರಿಶೀಲನನೆ ಮಾಡಿದ್ದರೂ ಅವಾಗ ಅವರಿಗೆ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿಗಳಿಕೆ ಸಾಬೀತು ಆಗಿದ್ದು ಅವರನ್ನೂ ಲೋಕಾಯುಕ್ತ ಪೊಲೀಸರು  ಬಂಧಿಸಿದ್ದಾರೆ.

ಅಜಿತ್​ಗೆ ಸೇರಿದ 12 ಕಡೆ ಲೋಕಾಯುಕ್ತ ನಿನ್ನೆ ದಾಳಿ

ಬೆಂಗಳೂರು ಸೇರಿ ಅಜಿತ್​ಗೆ ಸೇರಿದ 12 ಕಡೆ ಲೋಕಾಯುಕ್ತ ಪೊಲೀಸರು ನಿನ್ನೆ ದಾಳಿ ನಡೆಸಿದ್ದರು. ಸತತ 30 ಗಂಟೆಗಳ ಶೋಧ ನಡೆಸಿ ಲಭ್ಯವಾದ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮಾಡಿರುವುದು ಕಂಡು ಬಂದ ಹಿನ್ನೆಲೆ ಅಜಿತ್ ರೈ ಅವರನ್ನು ಬಂಧಿಸಲಾಗಿದ್ದು, 24 ಗಂಟೆಗಳ ಒಳಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ತನಿಖೆಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿದ್ದೇಷ್ಟು..?

ಲೋಕಾಯುಕ್ತ ಪೊಲೀಸರಿಗೆ 40 ಲಕ್ಷ ನಗದು, 700 ಗ್ರಾಂ ಚಿನ್ನ, 1.90 ಕೋಟಿ ಮೌಲ್ಯದ ವಸ್ತುಗಳನ್ನು, ಐಷಾರಾಮಿ ಕಾರು ಮತ್ತು ಬೈಕ್​ಗಳನ್ನು ವಶಕ್ಕೆ ಪಡೆದಿದ್ದರು. ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಲಭ್ಯವಾಗಿದ್ದು, ಅಜಿತ್ ರೈ ಸಂಬಂಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು ಪತ್ತೆಯಾಗಿವೆ. ಬೇನಾಮಿ ಹೆಸರಿನಲ್ಲಿ ಅಜಿತ್​ ರೈ ಆಸ್ತಿ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಲೋಕಾಯುಕ್ತ ಡಿವೈಎಸ್ಪಿ ಪ್ರಮೋದ್ ನೇತೃತ್ವದಲ್ಲಿ ನಾಲ್ಕು ಕಾರುಗಳಲ್ಲಿ  ಬೆಳ್ಳಂಬೆಳಗ್ಗೆ 4.30ರ ಸಮಯದಲ್ಲಿ ಅಜಿತ್ ರೈ ಮನೆ ಮೇಲೆ ದಾಳಿ ನಡೆದಿದೆ. ಸುಮಾರು 15 ಕ್ಕೂ ಹೆಚ್ಚು ಅಧಿಕಾರಿಗಳು ಅಜಿತ್ ರೈ ಮನೆಯ ಮೇಲೆ ದಾಳಿ ಮಾಡಿದ್ದರು.

 

 

RELATED ARTICLES

Related Articles

TRENDING ARTICLES