Monday, December 23, 2024

ಚಾಮುಂಡಿ ಬೆಟ್ಟದಲ್ಲಿ 2ನೇ ಆಷಾಢ ಶುಕ್ರವಾರದ ಸಂಭ್ರಮ : ತಾಯಿ ದರ್ಶನಕ್ಕೆ ಬಸ್ ಫ್ರೀ

ಮೈಸೂರು: ಆಷಾಢಮಾಸ 2ನೇ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗಿದೆ.ಈ ದಿನ ತಾಯಿ ಚಾಮುಂಡಿ ಭಕ್ತರಿಗೆ ಹಬ್ಬ. ಅದರಲ್ಲೂ ಆಷಾಢದ ಶುಕ್ರವಾರದಲ್ಲಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಮುಂಜಾನೆ 3 ಗಂಟೆಯಿಂದ  ಅಭಿಷೇಕ ಆರಂಭವಾಗಿ ಎರಡು ಗಂಟೆಗಳ ಕಾಲ ನಿರಂತರವಾಗಿ ಪೂಜೆ ನಡೆಯಿತ್ತು. ಅಭಿಷೇಕದ ನಂತರ ತಾಯಿ ದೇವಿಗೆ ಲಕ್ಷ್ಮೀ ಅಲಂಕಾರ ಮಾಡಿ ಬಳಿಕ‌ ೫ ಗಂಟೆ ೩೦ ನಿಮಿಷಕ್ಕೆ ಭಕ್ತರ ರ‍್ಶನಕ್ಕೆ ಅನುವು ಮಾಡಿಕೊಡಲಾಯಿತು.

ಇದನ್ನೂ ಓದಿ: ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

 ಖಾಸಗಿ ವಾಹನಗಳ ಪ್ರವೇಶ ನಿಷೇಧ

ಬೆಟ್ಟದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಬಾರದೆಂದು ಖಾಸಗಿ ವಾಹನಗಳ ಪ್ರವೇಶ ಕೂಡ ನಿಷೇಧಿಸಲಾಗಿದ್ದು, ಬೆಟ್ಟಕ್ಕೆ ಹೋಗಲು ಭಕ್ತರಿಗೆ ಜಿಲ್ಲಾಡಳಿತ50 ಕೆಎಸ್ಆರ್​​​​ಟಿಸಿ ಬಸ್ಸಿನ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ನಗರದ ಲಲಿತಾ ಮಹಲ್ ಹೆಲಿಪ್ಯಾಡ್‌ ಸಮೀಪದಿಂದ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.

ಆಷಾಢ ಶುಕ್ರವಾರದಂದು ಶಕ್ತಿ ದೇವತೆಯನ್ನು ಪೂಜಿಸಿದವರಿಗೆ ವಿಘ್ನಗಳು ನಿವಾರಣೆಯಾಗಿ ಇಷ್ಟಾರ್ಥ ಸಿದ್ಧಿಸುತ್ತದೆ ಅನ್ನೋ ನಂಬಿಕೆಯಿದೆ. ಈ ನಿಟ್ಟಿನಲ್ಲಿ ಮೈಸೂರು ಮಾತ್ರವಲ್ಲದೆ ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯದ ಲಕ್ಷಾಂತರ ಭಕ್ತರು ಸಹಾ ೨ನೇ ಆಷಾಢ ಶುಕ್ರವಾರದ ಪೂಜೆಗೆ ಆಗಮಿಸಿದ್ದಾರೆ.

 

 

RELATED ARTICLES

Related Articles

TRENDING ARTICLES