ಹೊಸಪೇಟೆ : ಎರಡು ಟಂಟಂ ಆಟೋ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಏಳು ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳ್ಳಾರಿಯಿಂದ ತುಂಗಭದ್ರಾ ಡ್ಯಾಂಗೆ ಕಡೆಗೆ ಆಟೋ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಸ್ಥಳಕ್ಕೆ ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರು ಬಳ್ಳಾರಿಯ ಕೌಲ್ ಬಜಾರ್ನ ಗೌತಮ್ ನಗರದವರು ಎಂದು ತಿಳಿದುಬಂದಿದೆ ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಹೊಸಪೇಟೆ ಶಾಸಕ ಎಚ್.ಆರ್ ಗವಿಯಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಆಸ್ತಿ ವಿಚಾರಕ್ಕೆ ಕೊಲೆ
ಆಸ್ತಿ ವಿವಾದ ವಿಚಾರ ಒಡಹುಟ್ಟಿದವನನ್ನೇ ಸಹೋದರರು ಕೊಂದ ಘಟನೆ ಗದಗ ಜಿಲ್ಲೆಯ ರೋಣ ಗ್ರಾಮೀಣ ಭಾಗದಲ್ಲಿ ನಡೆದಿದೆ. ಶೇಕಪ್ಪ ನವಲಗುಂದ (35) ಕೊಲೆಯಾದ ವ್ಯಕ್ತಿ. ಕೊಡಲಿಯಿಂದ ಭೀಕರವಾಗಿ ಕೊಚ್ಚಿ ಕೊಲೆಗೈದಿದ್ದಾರೆ. ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೈದ ಸಹೋದರರನ್ನ ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.