Thursday, January 2, 2025

ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಡಾ.ಕೆ ಸುಧಾಕರ್

ಬೆಂಗಳೂರು : ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಡಾ.ಕೆ ಸುಧಾಕರ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿರುವ ಡಾ.ಕೆ ಸುಧಾಕರ್ ಅವರು ಖಾಸಗಿ ದೂರು ಸಲ್ಲಿಸಿದ್ದಾರೆ. ಜೂನ್​​ 4ರಂದು ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

ಶಾಸಕ ಪ್ರದೀಪ್ ಈಶ್ವರ್ ಅವರು ಸಾರ್ವಜನಿಕವಾಗಿ ಮಾನಹಾನಿ ಮಾಡುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳ ಸಂದರ್ಶನದಲ್ಲಿ ಮಾನಹಾನಿ ರೀತಿ ಮಾತನಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಇದನ್ನೂ ಓದಿ : ನಾನು ಸೋತಿದ್ರೆ ಕೋರ್ಟ್ ಪಕ್ಕನೇ ಮನೆ ಮಾಡಬೇಕಿತ್ತು : ಪ್ರದೀಪ್ ಈಶ್ವರ್

ಶಾಸಕರು ಈ ಹೇಳಿಕೆಗಳಿಂದ ತಮ್ಮ ಘನತೆಗೆ ತೇಜೋವಧೆ ಮಾಡುತ್ತಿದ್ದಾರೆ. ಹೀಗಾಗಿ, ಪ್ರದೀಪ್ ಈಶ್ವರ್ ವಿರುದ್ಧ ಕ್ರಮಕ್ಕೆ ಕೈಗೊಳಬೇಕು. ತನ್ನ ವಿರುದ್ಧ ಮಾತನಾಡದಂತೆ ನಿರ್ಬಂಧ ಹೇರಬೇಕು ಎಂದು ಡಾ.ಕೆ ಸುಧಾಕರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

RELATED ARTICLES

Related Articles

TRENDING ARTICLES