ಮೈಸೂರು : ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿರುವುದಕ್ಕೆ ಸರ್ಕಾರದ ವಿರುದ್ದ ಎಬಿಬಿಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಹಳೆಯ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ಬಸ್ಗಳ ಸಂಖ್ಯೆ ಹೆಚ್ಚಾಗಬೇಕು. ಅಲ್ಲದೆ ವಿದ್ಯಾರ್ಥಿಗಳಿಗೂ ಉಚಿತ ಬಸ್ ವ್ಯವಸ್ಥೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಾಯಿಸಿದ್ದಾರೆ.
ಮಹಿಳೆಯರ ಉಚಿತ ಪ್ರಯಾಣದಿಂದ ವಿಧ್ಯಾರ್ಥಿಗಳಿಗೆ ಬಸ್ ಪ್ರಯಾಣ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಎಬಿವಿಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಆಸಿಡ್ ದಾಳಿಗೊಳಗಾದ ಸಂತ್ರಸ್ತೆಗೆ ಕೆಲಸ ನೀಡಿದ ಸಿದ್ದರಾಮಯ್ಯ
ಸಾರಿಗೆ ಬಸ್ಗಳಲ್ಲಿ ಮಹಿಳೆಆಸಿಡ್ ದಾಳಿಗೊಳಗಾದ ಸಂತ್ರಸ್ತೆಗೆ ಕೆಲಸ ನೀಡಿದ ಸಿದ್ದರಾಮಯ್ಯಯರೇ ಹೆಚ್ಚಾಗಿ ನಿಂತುಕೊಳ್ಳಲು ಸ್ಥಳವಿಲ್ಲದೆ ವಿಧ್ಯಾರ್ಥಿಗಳು ಕಷ್ಟಪಡುತ್ತಿದ್ದಾರೆ. ಅಲ್ಲದೆ ಬಸ್ಗಳ ಸಂಖ್ಯೆ ಕಡಿಮೆಯಾಗಿ ಸರಿಯಾದ ಸಮಯಕ್ಕೆ ಬಸ್ ಬಾರದೇ ಪರದಾಟ ಅನುಭವಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಕೆಎಸ್ಆರ್ಟಿಸಿ ಬಸ್‌ಗಳನ್ನೆ ವಲಂಬಿಸಿರುವ ವಿದ್ಯಾರ್ಥಿಗಳಿಗೆ ಓದಲು ಸಮಸ್ಯೆಯಾಗುತ್ತಿದೆ.
ಕೂಡಲೇ ರಾಜ್ಯ ಸರ್ಕಾರ ಎಲ್ಲಾ ವಿದ್ಯಾರ್ಥಿಗಳು ಸಹಕಾರ ಆಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಎಬಿವಿಪಿ ಆಗ್ರಹಿಸಿದೆ.