ಬೆಂಗಳೂರು: ಕರುನಾಡಿಗೆ ಮೇಲ್ಮೈ ಸುಳಿಗಾಳಿ ಹಾವಳಿಯಿಂದ ರಾಜ್ಯದಲ್ಲಿ 5 ದಿನ ಭಾರೀ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ,ಚಿಕ್ಕಬಳ್ಳಾಪುರ, ತುಮಕೂರು ಸೇರಿ ಹಲವೆಡೆ ಇಂದು ಮಳೆಯಗಲಿದೆ.
ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ. ಈ ಮೂರು ಜಿಲ್ಲೆಗಳಿಗೆ ಶುಕ್ರವಾರ ‘ಆರೆಂಜ್ ಅಲರ್ಟ್ ‘ ಘೋಷಿಸಲಾಗಿದೆ. ಈ ಮೂರು ಜಿಲ್ಲೆಗಳಲ್ಲದೇ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಜುಲೈ 3ರಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಕರಾವಳಿಯಲ್ಲಿ 40-45 ಕಿ.ಮೀ.ಯಿಂದ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ತಿಳಿಸಿದೆ.