Monday, June 3, 2024

ಮದ್ಯಾಹ್ನದ ಬಿಸಿಯೂಟ ಸೇವಿಸಿ 70 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ರಾಯಚೂರು : ಮಧ್ಯಾಹ್ನದ ಬಿಸಿಯೂಟ ಸೇವಿಸಿ 70ಕ್ಕು ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ರಾಯಚೂರ ತಾಲ್ಲೂಕಿನ ಅಪ್ಪನದೊಡ್ಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ 49 ಮಕ್ಕಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ಪೈಕಿ 3  ಮಕ್ಕಳಿಗೆ ವಾಂತಿಯಾಗಿದ್ದು ಉಳಿದೆಲ್ಲ‌‌ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ರಿಮ್ಸ್ ನಿರ್ದೇಶಕರಾದ ಬಸವರಾಜ ಪೀರಾಪುರ ಪವರ್ ಟಿವಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : 2023-24ನೇ ಸಾಲಿನ ಪರಿಷ್ಕೃತ ಪಠ್ಯಗಳ ಪ್ರತಿ ಪವರ್ ಟಿವಿಗೆ ಲಭ್ಯ

ಶಾಲೆಯ ಅಡುಗೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಮಕ್ಕಳು ಅಸ್ವಸ್ಥಗೊಂಡ ಆರೊಪ ಕೇಳಿಬಂದಿದ್ದು ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

RELATED ARTICLES

Related Articles

TRENDING ARTICLES