Monday, December 23, 2024

ಈಜಲು ತೆರಳಿದ್ದ ಯುವಕ ಸಾವು

ಚಿತ್ರದುರ್ಗ : ಈಜಲು ತೆರಳಿದ್ದ ಯುವಕ ನೀರುಪಾಲಾದ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಚಿಕ್ಕನಹಳ್ಳಿ ಗ್ರಾಮ ನಡೆದಿದೆ.

ಇದನ್ನೂ ಓದಿ : ಮದ್ಯಾಹ್ನದ ಬಿಸಿಯೂಟ ಸೇವಿಸಿ 70 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬಳ್ಳಾರಿ ಮೂಲದ ಮೊಹಮ್ಮದ್ ತವಬ್ ರಹೀಮ್ (19) ಮೃತ ಯುವಕ. ಚಿಕ್ಕನಹಳ್ಳಿ ಗ್ರಾಮದ ಬಳಿಯ ಕಲ್ಲಿನ ಕ್ವಾರಿಯಲ್ಲಿ ಇಂದು ಮೊಹಮ್ಮದ್ ತವಬ್ ರಹೀಮ್ ತನ್ನ ಗೆಳೆಯರ ಜೊತೆ ಈಜಲು ತೆರಳಿದ್ದಾಗ ಈ ದುರ್ಘಟನೆ ನಡೆದಿದೆ.

ಸದ್ಯ ಸ್ಥಳಕ್ಕೆ ರಾಂಪುರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

RELATED ARTICLES

Related Articles

TRENDING ARTICLES