Wednesday, December 25, 2024

ತುರ್ತಾಗಿ ಬೇಕಾಗಿದ್ದಾರೆ ವಿರೋಧ ಪಕ್ಷದ ನಾಯಕರು : ಟ್ವೀಟ್‌ನಲ್ಲೇ ಕಾಲೆಳೆದ ‘ಕೈ’ ಪಡೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಮುಗಿದು 50 ದಿನಗಳೇ ಕಳೆದಿದೆ. ಇಷ್ಟಾದರೂ ಬಿಜೆಪಿ ವಿರೋಧ ಪಕ್ಷದ ನಾಯಕನನ್ನ ಆಯ್ಕೆ ಮಾಡುವಲ್ಲಿ ಮೀನಾವೇಷೆ ಏಣಿಸುತ್ತಿದೆ. ಈ ವಿಚಾರದ ಕುರಿತು ಕಾಂಗ್ರೆಸ್‌ ಟ್ವೀಟ್‌ ಮಾಡಿ ಬಿಜೆಪಿಯನ್ನ ಟೀಕಿಸಿದೆ. 

ಹೌದು, ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಕಾಂಗ್ರೆಸ್​ ಬರೆದುಕೊಂಡಿದ್ದು, ʻʻಸಂವಿಧಾನ (Constitution) ತಿಳಿದವರು, ಪ್ರಜಾಪ್ರಭುತ್ವ ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ, ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದ ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಪ್ ಯೂನಿವರ್ಸಿಟಿಯಲ್ಲಿ (Whatsp University) ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು ಅಂತಹ ವಿಪಕ್ಷನಾಯಕ ಬೇಕಾಗಿದ್ದಾರೆʼʼ ಇದು ಯಾವುದೋ ಜಾಹೀರಾತಿನ ಪ್ರಕಟಣೆಯಲ್ಲ ರಾಜ್ಯ ಕಾಂಗ್ರೆಸ್‌, ಬಿಜೆಪಿಯನ್ನು (BJP) ಟ್ವೀಟ್‌ ಮೂಲಕ ಟೀಕಿಸಿರುವುದು.

ಕಾಂಗ್ರೆಸ್‌ ಟ್ವೀಟ್‌ನಲ್ಲಿ ಏನಿದೆ?

ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ

  • ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
  • ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
  • RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
  • ವಾಟ್ಸಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.
  • ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
  • ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.

RELATED ARTICLES

Related Articles

TRENDING ARTICLES