Monday, December 23, 2024

ಅಗತ್ಯಕ್ಕೆ ಅನುಗುಣವಾಗಿ ವಿದ್ಯುತ್ ಬಳಸಿ : ಸಿದ್ದರಾಮಯ್ಯ ಮನವಿ

ಬೆಂಗಳೂರು : ಅಗತ್ಯಕ್ಕೆ ಅನುಗುಣವಾಗಿ ವಿದ್ಯುತ್ ಬಳಸಿ ಎಂದು ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ, ಇಂದಿನಿಂದ ಗೃಹಜ್ಯೋತಿ ಯೋಜನೆಯಡಿ ಗರಿಷ್ಠ 200 ಯುನಿಟ್ ವರೆಗೆ ಗೃಹಬಳಕೆಯ ವಿದ್ಯುತ್ತನ್ನು ಉಚಿತವಾಗಿ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಬೆಲೆ ಏರಿಕೆಯೆಂಬ ಕಗ್ಗತ್ತಲು ದೇಶವನ್ನು ಆವರಿಸಿತ್ತು. ಈ ಸಮಯದಲ್ಲಿ ರಾಜ್ಯದ ಮನೆಗಳಿಗೆ ಬೆಳಕು ನೀಡುವ ಸದುದ್ದೇಶದಿಂದ ಗೃಹಜ್ಯೋತಿ ಕಾರ್ಯಕ್ರಮ ಜಾರಿಗೆ ತಂದಿದ್ದೇವೆ. ಅಗತ್ಯಕ್ಕೆ ಅನುಗುಣವಾಗಿ ವಿದ್ಯುತ್ ಬಳಸುವ ಮೂಲಕ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಿನಂತಿ ಮಾಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಇಂದು ಮಧ್ಯರಾತ್ರಿಯಿಂದಲೇ ಗೃಹಜ್ಯೋತಿ ಆರಂಭ

ಸಂಕಷ್ಟದ ಕತ್ತಲು ಸರಿಯಲಿ

ಕರ್ನಾಟಕದಲ್ಲಿ ಗೃಹಜ್ಯೋತಿ ಪ್ರಜ್ವಲಿಸಲಿದೆ. ಸಂಕಷ್ಟದ ಕತ್ತಲು ಸರಿಯಲಿ, ಸಂತಸದ ಬೆಳಕು ಬೆಳಗಲಿ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

50 ದಿನದೊಳಗೆ 3 ಗ್ಯಾರಂಟಿ

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ನಮ್ಮ ಐದು ಗ್ಯಾರಂಟಿಗಳು ಒಂದೊಂದಾಗಿ ಜಾರಿಯಾಗುತ್ತಿವೆ. ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಯಾಗಿ, ಯಶಸ್ವಿಯಾಗಿ ಜನರನ್ನು ತಲುಪಿದೆ. ಹಲವು ಕುತಂತ್ರಗಳ ನಡುವೆಯೂ ಅನ್ನಭಾಗ್ಯ ಯೋಜನೆಯನ್ನು ಜನರಿಗೆ ತಲುಪಿಸಲು ಕ್ರಮ ಕೈಗೊಂಡಿದ್ದೇವೆ. ನುಡಿದಂತೆ ನಡೆಯುತ್ತಿದ್ದೇವೆ, ಸರ್ಕಾರ ಬಂದು 50 ದಿನಗಳ ಒಳಗೆ 3 ಗ್ಯಾರಂಟಿಗಳನ್ನು ಜನರಿಗೆ ನೀಡಿದ್ದೇವೆ ಎಂದು ಹೇಳಿದೆ.

RELATED ARTICLES

Related Articles

TRENDING ARTICLES