Monday, December 23, 2024

ಬೆಂಗಳೂರು-ಮೈಸೂರು ಟೋಲ್ ಸಂಗ್ರಹ ವಿರೋಧಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿ(Bangalore-Mysore Highway)ಯ ಎರಡನೇ ಹಂತದ ಟೋಲ್​ ಸಂಗ್ರಹವನ್ನು ವಿರೋಧಿಸಿ ವಿವಿಧ ಕನ್ನಡಪರ‌ ಹಾಗೂ ರೈತ ಪರ ಸಂಘಟನೆಯಿಂದ ಇಂದು ಪ್ರತಿಭಟನೆನಡೆಸಲಾಗುತ್ತಿದೆ.

ಹೌದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್​ ಸಂಗ್ರಹಕ್ಕೆ ಮುಂದಾಗಿರುವ ಹಿನ್ನಲೆಯಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿದ್ದು,ಇನ್ನು ಕೆಲವು ತಿಂಗಳ ಹಿಂದೆಯಷ್ಟೇ ರರಾಮನಗರದ ಕಣಮಿಣಕಿ ಟೋಲ್ ಆರಂಭಿಸಲಾಗಿತ್ತು. ಇನ್ನು ದಶಪಥ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿಲ್ಲ. ಸರ್ವಿಸ್ ರಸ್ತೆಯು ಸರಿಯಾಗಿ ಇಲ್ಲ. ಈಗಾಗಲೇ ಒಂದು ಟೋಲ್​ಗೆ ಕಟ್ಟುತ್ತಿರುವ ಶುಲ್ಕ ಹೊರೆ ಬೀಳುತ್ತಿದೆ. ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಟೋಲ್​​​ ಸಂಗ್ರಹ ವಿರೋಧಿಸಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ
ಬೆಂಗಳೂರು-ಮೈಸೂರು ಟೋಲ್ ಸಂಗ್ರಹ ಪ್ರಾರಂಭ ಹಿನ್ನೆಲೆ, ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗಿದೆ ಗಣಂಗೂರು ಬಳಿಯ ಟೋಲ್ ಬಳಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅವೈಜ್ಞಾನಿಕ ರಸ್ತೆ ನಿರ್ಮಾಣ, ಟೋಲ್ ದರ ಹೆಚ್ಚಳ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ ಟೋಲ್​​ನಲ್ಲಿ ಕೆಲಸ ಮಾಡಲು ಸ್ಥಳೀಯರನ್ನ ನೇಮಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು
ಪೊಲೀಸರ ಸರ್ಪಗಾವಲಿನಲ್ಲಿ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು
ಪೊಲೀಸರ ಸರ್ಪಗಾವಲಿನಲ್ಲಿ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರ ಸಮಸ್ಯೆಗಳನ್ನ ಬಗೆಹರಿಸೊವರೆಗೂ ಟೋಲ್ ಸಂಗ್ರಹ ಮಾಡಬಾರದೆಂದು ಆಗ್ರಹ ಮಾಡಿದರು.

ಟೋಲ್ ಸಂಗ್ರಹಕ್ಕೆ ಮುಂದಾಗಿರುವ NHAI

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್​ ಸಂಗ್ರಹಕ್ಕೆ ಮುಂದಾಗಿದ್ದು, ಇದನ್ನು ವಿರೋಧಿಸಿ ಇದೀಗ ಕನ್ನಡಪರ‌ ಹಾಗೂ ರೈತ ಪರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದು, ಸಂಘಟನೆಯ ಪದಾಧಿಕಾರಿಗಳು ಒಬ್ಬೊಬ್ಬರಾಗಿ ಟೋಲ್ ಪ್ಲಾಜಾದಲ್ಲಿ ಬಳಿ ಜಮಾಯಿಸುತ್ತಿದ್ದಾರೆ. ಈ ಮಧ್ಯೆ ಟೋಲ್ ಪ್ಲಾಜಾದಲ್ಲಿ ಕನ್ನಡಿಗರಿಗೆ ಕೆಲಸ ನೀಡದೆ ಹೊರ ರಾಜ್ಯದವರಿಗೆ ಕೆಲಸ ನೀಡಿದ್ದು, ಮತ್ತಷ್ಟು ಆಕ್ರೋಶ ಕಾರಣವಾಗಿದೆ.

ಟೋಲ್ ಶುಲ್ಕದ ವಿವರ ಇಲ್ಲಿದೆ

ಏಕಮುಖ ಸಂಚಾರ

1) ಕಾರು, ಜೀಪು, ವ್ಯಾನು – 155 ರೂ

2) ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 250 ರೂ

3) ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು)- 525 ರೂ

4) ಮೂರು ಆಕ್ಸಲ್ ವಾಣಿಜ್ಯ ವಾಹನ – 575 ರೂ

5) ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 825 ರೂ

6) ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1005 ರೂ

ಅದೇ ದಿನ ವಾಪಸ್ಸು

1) ಕಾರು, ಜೀಪು, ವ್ಯಾನು – 235 ರೂ

2) ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 375 ರೂ

3) ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 790 ರೂ

4) ಮೂರು ಆಕ್ಸಲ್ ವಾಣಿಜ್ಯ ವಾಹನ – 860 ರೂ

5) ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 1240 ರೂ

6) ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1510 ರೂ

 

 

 

RELATED ARTICLES

Related Articles

TRENDING ARTICLES