Wednesday, January 22, 2025

ರೌಡಿ ಶೀಟರ್ ಸುಧೀರ್ ಹತ್ಯೆ ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

ಮಂಡ್ಯ: ರೌಡಿ ಶೀಟರ್ ಸುಧೀರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಎಸ್.ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 24ಗಂಟೆಯಲ್ಲಿ ಆರೋಪಿಗಳನ್ನು ಬಂಧಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುಮಾರ್,ಚೆಲುವರಾಜು, ಪೂರ್ಣಚಂದ್ರ ಹಾಗೂ ವಿನೋದ್ ಬಂಧಿತ ಆರೋಪಿಗಳು. ಗುರುವಾರ ಸಂಜೆ ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ಹುಲಿಕೆರೆ ಗ್ರಾಮದಲ್ಲಿ ರೌಡಿ ಶೀಟರ್ ಸುಧೀರ್(35) ನನ್ನು ಹಳೆ ವೈಷಮ್ಯಕ್ಕೆ ಕುಡಿದು ಗಲಾಟೆ ಮಾಡಿಕೊಂಡು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

ಇದನ್ನೂ ಓದಿ : ಅಕ್ಕಿ ಬದಲು ಹಣ ನೀಡುವ ಪ್ರಕ್ರಿಯೆಗೆ ಇದೇ ತಿಂಗಳು ಚಾಲನೆ: ಸಚಿವ ಸತೀಶ್ ಜಾರಕಿಹೋಳಿ

ಈ ಪ್ರಕರಣವು ಕೆ.ಆರ್.ಎಸ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿತ್ತು. ಈ ಸಂಬಂಧ ಪ್ರತ್ಯೇಕ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು  ಆರೋಪಿಗಳ ವಶಕ್ಕೆ ಪಡೆದು ನ್ಯಾಯಾಂಗ ಬಂಧನದಲ್ಲಿರಿಸಿದ್ದಾರೆ.

24 ಗಂಟೆಗಳಲ್ಲೇ ಆರೋಪಿಗಳನ್ನು ಬಂಧಿಸಿರುವ ಕೆ.ಆರ್.ಎಸ್.ಪೊಲೀಸರ ಕಾರ್ಯಾಚರಣೆಗೆ ಜಿಲ್ಲಾ ಎಸ್ಪಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES