Wednesday, January 22, 2025

ಹೆದ್ದಾರಿ ಪ್ರಾಧಿಕಾರ ಕೇಂದ್ರ ಸರಕಾರದ ನಿಯಂತ್ರಣದಲ್ಲಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ಮೈಸೂರು: ಮೈಸೂರು-ಬೆಂಗಳೂರು ಹೈವೇನಲ್ಲಿ ಟೋಲ್ ಸಂಗ್ರಹ ವಸೂಲಿ ಬೇಡ ಅಂತ ಸೂಚನೆ ಕೊಟ್ಟಿದ್ವಿ ಅದರೂ ಕೂಡ ವಸೂಲಿ ಮಾಡುತ್ತಿದ್ದಾರೆ. ಹೆದ್ದಾರಿ ಪ್ರಾಧಿಕಾರದ ನಿಯಂತ್ರಣ ಕೇಂದ್ರ ಸರಕಾರದ ಕೈಯಲ್ಲಿ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ್‌ ಮೈಸೂರು ಹೈವೆಯಲ್ಲಿ ಸುಗಮ ಸುರಕ್ಷಿತ ಸಂಚಾರಕ್ಕೆ ಯಾವುದೇ ಕ್ರಮವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತೆಗೆದು ಕೊಂಡಿಲ್ಲ. ಹೈವೆಯಲ್ಲಿ ಸಂಚಾರದಲ್ಲೂ ಕೂಡ ಯಾವುದೇ ಸೂಚನ‌ ಫಲಕ ಅಳವಡಿಕೆ ಆಗಿಲ್ಲ ಎಂದು ವ್ಯವಸ್ಥಿತವಾಗಿ ಏನೂ ಮಾಡಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಟೋಲ್ ಸಂಗ್ರಹ ವಿರೋಧಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ನಾವು ರಾಜ್ಯದ ಸಂಚಾರ ವಿಭಾಗದ ಎಡಿಜಿಪಿ ನನಗೆ ಈ ಬಗ್ಗೆ ಮೌಖಿಕವಾಗಿ ಈಗಲೇ ವರದಿ ಕೊಟ್ಟಿದ್ದಾರೆ. ಹೆದ್ದಾರಿಯಲ್ಲಿ ದರೋಡೆ ಕೂಡ ನಡೆಯುತ್ತಿವೆ ಇದನ್ನು ತಡೆಯೋಕೆ ಕ್ರಮವಹಿಸಿದ್ದೇವೆ. ಹೆದ್ದಾರಿ ಪ್ರಾಧಿಕಾರಕ್ಕೆ ಟೋಲ್ ವಸೂಲಿ ಬೇಡ ಅಂತಾ ಸೂಚನೆ ಕೊಟ್ಟಿದ್ದೇವು. ಆದರೂ ಟೋಲ್ ವಸೂಲಿ ಶುರು ಮಾಡಿದ್ದಾರೆ.

ಹೆದ್ದಾರಿ ಪ್ರಾಧಿಕಾರ ಕೇಂದ್ರ ಸರಕಾರದ ನಿಯಂತ್ರಣದಲ್ಲಿದೆ

ಹೆದ್ದಾರಿ ಪ್ರಾಧಿಕಾರ ಕೇಂದ್ರ ಸರಕಾರದ ನಿಯಂತ್ರಣದಲ್ಲಿದೆ.ಅವಸರವಾಗಿ ಹೆದ್ದಾರಿ ಉದ್ಘಾಟನೆ ಮಾಡಿದ್ದಾರೆ.ರಾಜಕೀಯ ಉದ್ದೇಶದಿಂದ ತರಾತುರಿಯಲ್ಲಿ ಉದ್ಘಾಟನೆ ಮಾಡಿರುವುದರಿಂದ ಹೀಗಾಗಿ ಇಷ್ಟೆಲ್ಲ ಸಮಸ್ಯೆ ಆಗುತ್ತಿದೆ.ಹೈವೆಯಲ್ಲಿ ಇಷ್ಟು ಬೇಗ ಅಷ್ಟು ಜನ ಸಾಯುತ್ತಾರೆ ಎಂದರೆ ಅದರ ಅರ್ಥ ಬಹಳ ಲೋಪವಾಗಿದೆ. ಜನರಿಗೆ ತೊಂದರೆ ಆಗದಂತೆ ಜನರ ಸುರಕ್ಷತೆಗೆ ಬೇಕಾದ ಕ್ರಮ ಜರುಗಿಸುತ್ತೇವೆ ಎಂದಿದ್ದಾರೆ.

 

 

 

 

 

RELATED ARTICLES

Related Articles

TRENDING ARTICLES