Thursday, December 19, 2024

ಬೊಲೆರೋ ಕಾರು ಮತ್ತು ಬೈಕ್ ನಡುವೆ ಡಿಕ್ಕಿ : ಬೈಕ್ ಸವಾರ ಸಾವು

ತುಮಕೂರು: ಬೋಲೆರೋ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಕೃಷ್ಣಗಿರಿ ಗೇಟ್ ಬಳಿ ನಡೆದಿದೆ.

ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್! : ಜು.14ರಿಂದ ಅರ್ಜಿ ಸಲ್ಲಿಕೆ

ಪಾವಗಡ ತಾಲೂಕಿನ ವೀರ್ಲಗೊಂದಿ ಗ್ರಾಮದ ನಿವಾಸಿ ಗೋವಿಂದ (33) ಮೃತ ದುರ್ದೈವಿ. ಬೈಕ್ ನಲ್ಲಿ ಬರುವಾಗ ಬೋಲೆರೋ ವಾಹನ ಡಿಕ್ಕಿಯಾಗಿ ದುರಂತ ಸಂಭವಿಸಿದೆ, ಈ ನಡುವೆ ಬೈಕ್ ಗೆ ಡಿಕ್ಕಿಹೊಡೆದ ಬೋಲೆರೊ ಚಾಲಕ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಘಟನೆಯು ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

RELATED ARTICLES

Related Articles

TRENDING ARTICLES