Monday, December 23, 2024

ಏಕನಾಥ್ ಶಿಂಧೆ ಸರ್ಕಾರಕ್ಕೆ ಅಜಿತ್ ‘ಪವರ್’, ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು : ಮಹಾರಾಷ್ಟ್ರ ರಾಜಕೀಯದಲ್ಲಿ ಭಾರೀ ಸಂಚಲನ ಉಂಟಾಗಿದೆ. ದಿಢೀರ್‌ ರಾಜಕೀಯ ಬೆಳವಣಿಗೆಯಲ್ಲಿ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ ಅಜಿತ್‌ ಪವಾರ್‌ ನೇತೃತ್ವದಲ್ಲಿ 29 ಶಾಸಕರು, ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಬಣದ ಜೊತೆ ‘ಕೈ’ ಜೋಡಿಸಿದ್ದಾರೆ.

ಮಹಾರಾಷ್ಟ್ರ ರಾಜಕೀಯ ಇತಿಹಾಸದಲ್ಲಿ ಶಿವಸೇನೆಯ ಏಕನಾಥ್‌ ಶಿಂಧೆ ಬಣ, ಬಿಜೆಪಿ ಹಾಗೂ ಎನ್‌ಸಿಪಿ ಅಜಿತ್‌ ಪವಾರ್‌ ಬಣ ಕೈ ಜೋಡಿಸಿ ಸರ್ಕಾರ ನಡೆಸುತ್ತಿದೆ. 29 ಶಾಸಕರ ಬೆಂಬಲದೊಂದಿಗೆ ರಾಜಭವನ ತಲುಪಿದ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಮುಖ್ಯಮಂತ್ರಿ ಏಕನಾಥ್ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನಾವೀಸ್‌ ಸಮ್ಮುಖದಲ್ಲಿ ಪವಾರ್‌ ಸೇರಿದಂತೆ ಇತರ ಶಾಸಕರು ಪ್ರಮಾಣವಚನ ಸ್ವೀಕರಿಸಿದರು. ಶರದ್ ಪವಾರ್ ಏಕಪಕ್ಷೀಯ ನಿರ್ಧಾರಗಳ ಹಿನ್ನಲೆಯಲ್ಲಿ ಎನ್‌ಸಿಪಿಯಲ್ಲಿ ಬಿರುಕು ಏರ್ಪಟ್ಟಿದೆ.

ಇದನ್ನೂ ಓದಿ : ಸತ್ಯ ಹೇಳಿದ್ರೆ ನಾನು ಮಠ ಸೇರಲ್ಲ! : ಕಾಂಗ್ರೆಸ್ ಸರ್ಕಾರದ ಉಳಿವಿನ ಬಗ್ಗೆ ಕೋಡಿ ಶ್ರೀ ಭವಿಷ್ಯ

ಶರದ್‌ ವಿರುದ್ಧ ಅಜಿತ್ಪವರ್‌‘ 

ಪಾಟ್ನಾದಲ್ಲಿ ವಿಪಕ್ಷಗಳ ಸಭೆಯಲ್ಲಿ ಭಾಗಿಯಾಗುವ ವಿಚಾರ ಮತ್ತು ಹಾಗೂ ರಾಹುಲ್ ಗಾಂಧಿ ಜೊತೆಗೆ ಕೈ ಜೋಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಶರದ್‌ ಪವರ್‌ ನಿರ್ಧಾರ ತೆಗೆದುಕೊಂಡಿದ್ದರು. ಶಾಸಕರ ಅಭಿಪ್ರಾಯ ಪಡೆಯದೇ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಹಿನ್ನಲೆಯಲ್ಲಿ ಸಿಟ್ಟಾದ ಶಾಸಕರು ಅಜಿತ್ ಪವಾರ್ ಅವರನ್ನು ಬೆಂಬಲಿಸಲು ನಿರ್ಧಾರ ತೆಗೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES