Wednesday, January 22, 2025

ಹೊಳೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು

ಮಂಡ್ಯ : ಹೊಳೆಯಲ್ಲಿ ಈಜಲು ಹೋಗಿದ್ದ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಮದ್ದೂರಮ್ಮ ದೇವಾಲಯದ ಹಿಂಭಾಗದ ಕೊಲ್ಲಿ ಹೊಳೆ‌ ಬಳಿ ಈ ದುರ್ಘಟನೆ ಸಂಭವಿಸಿದೆ. ಪಟ್ಟಣದ ನಾಲ್ಕನೇ ಕ್ರಾಸ್ ನ ನಿವಾಸಿಗಳಾದ ಅಜಲಮ್ ಪಾಷಾ (16) ಹಾಗೂ ಮಹಮ್ಮದ್ ಅಲಿ (13) ಮೃತ ಬಾಲಕರು.

ನೀರಿನ ಸುಳಿಗೆ ಸಿಲುಕಿ ಸಾವು

ಅಜಲಮ್ ಹಾಗೂ ಮಹಮ್ಮದ್ ನೀರಿನಲ್ಲಿ ಈಜಲು ತೆರಳಿದ್ದರು. ಈ ವೇಳೆ ಮಹಮ್ಮದ್ ನೀರಿನಲ್ಲಿ ಮುಳುಗುತ್ತಿದ್ದು ಅಜಲಮ್ ರಕ್ಷಣೆಗೆ ಮುಂದಾಗಿದ್ದನು. ಆಗ ನೀರಿನ ಸುಳಿಗೆ ಸಿಲುಕಿ ಇಬ್ಬರು ನೀರು ಪಾಲಾಗಿದ್ದಾರೆ. ಮೃತ ಬಾಲಕರ ಪೋಷಕರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ : ಈಜಲು ತೆರಳಿದ್ದ ಯುವಕ ಸಾವು

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕರ ಮೃತ ದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES