Monday, December 23, 2024

ರಾಜ್ಯ ಬಿಜೆಪಿ ಕಚೇರಿಯಲ್ಲಿ ಹೃದಯಾಘಾತದಿಂದ ಮುಖಂಡ ಸಾವು

ಬೆಂಗಳೂರು : ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಹೃದಯಾಘಾತದಿಂದ ಬಿಜೆಪಿ ಮುಖಂಡ ಸಾವನ್ನಪ್ಪಿದ ಘಟನೆ ನಡೆದಿದೆ.

ಸಿದ್ದೇಶ್ ಯಾದವ್ ಹೃದಯಾಘಾತದಿಂದ ಮೃತ ಪಟ್ಟ ಬಿಜೆಪಿ ಮುಖಂಡ. ಮೃತ ಸಿದ್ದೇಶ್ ಯಾದವ್ ಅವರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ನಿವಾಸಿಯಾಗಿದ್ದಾರೆ.

ಇಂದು ಮಧ್ಯಾಹ್ನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಪ್ರಭಾರಿಗಳ ಸಭೆ ಆಯೋಜಿಸಲಾಗಿತ್ತು. ಸಿದ್ದೇಶ್ ಯಾದವ್ ಈ ಸಭೆಯಲ್ಲಿ ಪಾಲ್ಗೊಳ್ಳಲು ಬಂದಿದ್ದರು. ಸಭೆ ನಡೆಯುವಾಗಲೇ ಎದೆನೋವು ಎಂದು ಕೆಳಗೆ ಇಳಿದು ಬಂದಿದ್ದರು. ಬಳಿಕ, ದಿಢೀರ್ ಕುಸಿದು ಬಿದ್ದಿದ್ದಾರೆ.

ಇದನ್ನೂ ಓದಿ : ಹೊಳೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು

ಕೂಡಲೇ ಅವರನ್ನು ರವಿಕುಮಾರ್ ಪಿಎ ಶ್ರೀಕಾಂತ್ ಜೊತೆಗೂಡಿ ಕೆ.ಸಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಹೃದಯಾಘಾತಗೊಂಡು ಸಿದ್ದೇಶ್ ಸಾವನ್ನಪ್ಪಿದ್ದಾರೆ. ಮೃತ ಸಿದ್ದೇಶ್ ಅವರು ಬಿಜೆಪಿ ಪಕ್ಷದ ಬಳ್ಳಾರಿ ವಿಭಾಗದ ಪ್ರಭಾರಿಯಾಗಿದ್ದರು.

ಬೊಮ್ಮಾಯಿ ಸಂತಾಪ

ಸಿದ್ದೇಶ್ ಯಾದವ್ ನಿಧನಕ್ಕೆ ಬಿಜೆಪಿ ಪಕ್ಷ ಹಾಗೂ ಮುಖಂಡರು ಕಂಬನಿ ಮಿಡಿದಿದ್ದಾರೆ. ಈ ಕುರಿತು ಟ್ವೀಟ್ ಮಾಡಿದರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್ ಯಾದವ್ ಅವರು ನಿಧನರಾದ ವಿಷಯ ತಿಳಿದು ತುಂಬಾ ದುಃಖಿತನಾಗಿದ್ದೇನೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿಯೆಂದು ಪ್ರಾರ್ಥಿಸುತ್ತೇನೆ‌ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES