Saturday, September 28, 2024

ವಿಪಕ್ಷ ನಾಯಕನಿಲ್ಲದೆ ಕಲಾಪ ನಡೆಯುತ್ತಿರುವುದು ಇದೇ ಮೊದಲು : ಕಾಂಗ್ರೆಸ್‌ ಟೀಕೆ

ಬೆಂಗಳೂರು: ವಿಧಾನಸೌಧ ಇತಿಹಾಸದಲೇ ಮೊದಲ ಬಾರಿಗೆ ವಿಪಕ್ಷ ನಾಯಕನಿಲ್ಲದೆ ನಡೆಯುತ್ತೀರುವ ಮೊದಲ ಅಧಿವೇಶನವಿದ್ದು ಎಂದು ಟೀಕಿಸಿ ಕಾಂಗ್ರೆಸ್​ ಟ್ವೀಟ್​ ಮಾಡಿದೆ.

ಹೌದು, ವಿಧಾನಮಂಡಲ ಅಧಿವೇಶನ ಆರಂಭವಾದರೂ ವಿಧಾನಸಭೆಯಲ್ಲಿ ವಿರೋಧ ಪಕ್ಷ ನಾಯಕ ಇಲ್ಲದೇ ಇರುವ ಸ್ಥಿತಿಯು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ವಿರುದ್ಧ ಕಿಡಿಕಾರಿದೆ.

ಇನ್ನು ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ ಗೌರವಿಸುತ್ತಿಲ್ಲ” ಎಂದು ಆರೋಪಿಸಿದೆ.

ಇದನ್ನು ಓದಿ: ನಾವು ಇನ್ನು ಸತ್ತಿಲ್ಲ, ಬದುಕಿದ್ದೀವಿ : ಡಾ.ಕೆ ಸುಧಾಕರ್ ಟಾಂಗ್

“ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು, ಸದನವೂ ಪ್ರಾರಂಭವಾಯ್ತು. ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹೀನಾಯ ಸ್ಥಿತಿಯಲ್ಲಿದೆ!” ಎಂದು ಕಾಂಗ್ರೆಸ್‌ ಟೀಕಿಸಿದೆ.

 

RELATED ARTICLES

Related Articles

TRENDING ARTICLES