Wednesday, October 23, 2024

“ಕೈ” ನಾಯಕರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಮೊದಲು ನೋಡಿಕೊಳ್ಳಲಿ : ರವಿಕುಮಾರ್ ಕಿಡಿ

ಬೆಂಗಳೂರು : ಪಕ್ಷದಲ್ಲಿ ಸಕ್ರೀಯವಾಗಿದ್ದ ನಮ್ಮ ಕಾರ್ಯಕರ್ತ ಸಿದ್ದೇಶ್​ನ ಸಾವು ನಮಗೆ ನೋವು ತಂದಿದೆ, ಬಳ್ಳಾರಿ,ರಾಯಚೂರು ಸೇರಿದಂತೆ ನಾಲ್ಕು ಜಿಲ್ಲೆಗಳ ಪ್ರಭಾರಿಯಾಗಿ ಕೆಲಸ ನಿರ್ವಹಿಸಿದ್ದರು ಎಂದು ಬಿಜಿಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಪರಿಷತ್ ಸದಸ್ಯ ಎನ್.ರವಿಕುಮಾರ್ ಸಿದ್ಧೇಶ್ ಸಾವಿಗೆ ಸಂತಾಪ ಸೂಚಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಸಿದ್ದೇಶ್ ಸಾವು ಪಕ್ಷದ ನಾಯಕರಿಗೆಲ್ಲ ದುಖಃದ ವಿಚಾರವಾಗಿದೆ ಎಂದು ವಿಷಾದಿಸಿದರು.

ಬಳಿಕ ಮಾತನಾಡಿದ ಪರಿಷತ್ ಸದಸ್ಯ ರವಿಕುಮಾರ್, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ನ್ಯೂನ್ಯತೆಗಳನ್ನು ವಿರೋಧಿಸಿ ನಾಳೆ ಹೋರಾಟ ನಡೆಸಲಿದ್ದೇವೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿ ರಾಜ್ಯ ಸರ್ಕಾರದ ಗ್ಯಾರಂಟಿ ವೈಫಲ್ಯಗಳನ್ನು ಖಂಡಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ : ವಿಪಕ್ಷ ನಾಯಕನಿಲ್ಲದೆ ಕಲಾಪ ನಡೆಯುತ್ತಿರುವುದು ಇದೇ ಮೊದಲು : ಕಾಂಗ್ರೆಸ್‌ ಟೀಕೆ

ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪರಿಷತ್​ನಲ್ಲಿ ಕೋಟಾ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಪಕ್ಷದ ಶಾಸಕರು ಎರಡೂ ಸದನಗಳಲ್ಲಿ ಹೋರಾಟ ನಡೆಸಲಿದ್ದಾರೆ ಎಂದು ತಿಳಿಸಿದರು.

ವಿಪಕ್ಷ ನಾಯಕರಿಲ್ಲದ ಕುರಿತು ಕಾಂಗ್ರೆಸ್ ನಾಯಕರ ಹೇಳಿಕೆಯ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್​ಗೆ ಅಧ್ಯಕ್ಷರೇ ಇಲ್ಲದೆ ಕಾಲವನ್ನು ಕಳೆದಿದ್ದಾರೆ. ಅಲ್ಲದೆ ಲೋಕಸಭೆಯಲ್ಲಿ ವಿಪಕ್ಷ ನಾಯಕರೇ ಇಲ್ಲವೆಂದು ಕೈ ನಾಯಕರಿಗೆ ತಿರುಗೇಟು ನೀಡಿದರು.

ನಮ್ಮಲ್ಲಿ ಗೊಂದಲವಿಲ್ಲ ಸ್ವಲ್ಪ ತಡವಾಗಿದೆ ಆದರೂ ವಿಪಕ್ಷ ನಾಯಕನ ಆಯ್ಕೆಯನ್ನು ಮಾಡುತ್ತೇವೆ ,ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಅದನ್ನು ಮೊದಲು ನೋಡಿಕೊಳ್ಳಲಿ ಎಂದು ವ್ಯಂಗ್ಯವಾಡಿದರು.

RELATED ARTICLES

Related Articles

TRENDING ARTICLES