Sunday, December 22, 2024

ಚಿಕ್ಕಬಳ್ಳಾಪುರಕ್ಕಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಚಿಕ್ಕಬಲ್ಲಾಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. 

ಹೌದು, ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ಮುರ್ಮು ಭೇಟಿ ನೀಡಲಿದ್ದು, ದೆಹಲಿಯಿಂದ ಐಎಎಫ್​​ಎಂಐ-17 ವಿಶೇಷ ವಿಮಾನದ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಷ್ಟ್ರಪತಿ ದ್ರೌಪದಿ ಮುರ್ಮು, ಅಲ್ಲಿಂದ ಮಧ್ಯಾಹ್ನ 3.55ಕ್ಕೆ ಹೆಲಿಕಾಪ್ಟರ್​ ಮೂಲಕ ಮುದ್ದೇನಹಳ್ಳಿ ಗ್ರಾಮಕ್ಕೆ ತೆರಳಲಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ನಿವಾಸದ ಮೇಲೆ ಅನಾಮಿಕ ಡ್ರೋನ್ ಹಾರಾಟ,ದೂರು ದಾಖಲು

ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ 2ನೇ ಘಟಿಕೋತ್ಸವ ದ್ರೌಪದಿ ಮುರ್ಮು

ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮುರ್ಮು ಭಾಗಿಯಾಗಲಿದ್ದಾರೆ. ಪುಲ್ಲೇಲ ಗೋಪಿಚಂದ್, ತುಳಸಿಗೌಡ, ಪ್ರೊ.ವಿಜಯ್ ಶಂಕರ್ ಶುಕ್ಲಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಆರು ಮಂದಿಗೆ ಗೌರವ ಡಾಕ್ಟರೇಟ್ ಹಾಗೂ 17 ವಿದ್ಯಾರ್ಥಿಗಳಿಗೆ ಮುರ್ಮು ಚಿನ್ನದ ಪದಕ ಪ್ರದಾನ ಮಾಡಲಿದ್ದಾರೆ.

ನಂದಿಗಿರಿಧಾಮ (ನಂದಿ ಬೆಟ್ಟ) ಮತ್ತು ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ 

ರಾಷ್ಟ್ರಪತಿ ಆಗಮನ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ಜುಲೈ 2ರ ಬೆಳಗ್ಗೆ 6 ಗಂಟೆಯಿಂದ ಜುಲೈ 3ರ ಸಂಜೆ 6 ಗಂಟೆಯ ವರೆಗೆ ನಂದಿಗಿರಿಧಾಮ ಮತ್ತು ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಹೊರಡಿಸಿದ್ದಾರೆ.

ದ್ರೌಪದಿ ಮುರ್ಮು ಭದ್ರತೆಗಾಗಿ ಮೂವರು ಎಸ್ಪಿಗಳು, 10 ಡಿವೈಎಸ್ಪಿಗಳು, 28 ಪೊಲೀಸ್‌ ಇನ್​ಸ್ಪೆಕ್ಟರ್​, 60 ಪಿಎಸ್‌ಐಗಳು, ಡಿಎಆರ್‌ನ 7 ತುಕಡಿ ,ಕೆಎಸ್ಆರ್‌ಪಿಯ 3 ತುಕಡಿ ಸೇರಿ ಸುಮಾರು 700 ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇನ್ನೂ ರಾಷ್ಟ್ರಪತಿ ಅವರಿಗಾಗಿ ವಿಶೇಷ ಔತಣಕೂಟ ಆಯೋಜಿಸಿರುವ ರಾಜ್ಯಪಾಲರು ಇಂದು ರಾಜಭವನದಲ್ಲಿ ರಾಷ್ಟ್ರಪತಿ ವಾಸ್ತವ್ಯ ಹೂಡಲಿದ್ದು, ಕಾರ್ಯಕ್ರಮ ಮುಗಿದ ನಂತರ ಮಂಗಳವಾರ ಬೆಳಗ್ಗೆ ಹೈದ್ರಾಬಾದ್ ಗೆ ತೆರಳಲಿದ್ದಾರೆ.

RELATED ARTICLES

Related Articles

TRENDING ARTICLES