Sunday, January 19, 2025

ಖಾಸಗಿ ಬಸ್ ಬೈಕ್ ಗೆ ಡಿಕ್ಕಿ : ಪಿಯುಸಿ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ.

ಹೌದು, ಮೃತ ವಿದ್ಯಾರ್ಥಿನಿಯನ್ನು ಎಂಇಎಸ್ ಕಾಲೇಜ್ ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದಿಶಾ(18) ಎಂದು  ಗುರುತಿಸಲಾಗಿದೆ.

ಇದನ್ನು ಓದಿ: ಕಾರು ಡ್ರೈವರ್ ಗೆ ಹೆಲ್ಪ್ ಮಾಡಲು ಹೋದ ಕಾನ್ಸ್‌ಟೇಬಲ್ ದಾರುಣ ಸಾವು

ದಿಶಾ ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದು, ತಂದೆ-ಮಗಳು ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಅಪಘಾತದಲ್ಲಿ ಮಗಳು ದಿಶಾ ಸಾವನಪ್ಪಿದ್ದು, ತಂದೆ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

RELATED ARTICLES

Related Articles

TRENDING ARTICLES