ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಹೌದು, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್,ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು ಅವರು ಪ್ರಮಾಣವಚನ ಸ್ವೀಕರಿಸಿದರು.
ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನಲ್ಲಿ ಹಾಗೂ ತಿಪ್ಪಣಪ್ಪ ಕಮಕನೂರು ಅವರು ಯಾನಾಗುಂದಿ ಮಾತಾ ಮಾಣಿಕೇಶ್ವರಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ: ಡಿಕೆಶಿ ರಾಜಾ ಹರಿಶ್ಚಂದ್ರನಿಗಿಂತ ಸತ್ಯವಂತರಿದ್ದಾರೆ : ಶಾಸಕ ಯತ್ನಾಳ್ ಪಂಚ್
ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು.
ವಿಧಾನ ಪರಿಷತ್ನ ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಜಗದೀಶ್ ಶೆಟ್ಟರ್, ಬೋಸರಾಜು ಮತ್ತು ತಿಪ್ಪಣ್ಣ ಕಮಕನೂರ ಅವರಿಗೆ ಮುಖ್ಯಮಂತ್ರಿ @siddaramaiah ಅವರು ಅಭಿನಂದಿಸಿ, ಶುಭ ಹಾರೈಸಿದರು. pic.twitter.com/m85y7SEJq7
— CM of Karnataka (@CMofKarnataka) July 3, 2023
ಇದೇ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಇದ್ದರು.