Wednesday, January 22, 2025

ಕಡಿದು ಬಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು

ಮಂಗಳೂರು : ಕಡಿದು ಬಿದ್ದ ವಿದ್ಯುತ್ ತಂತಿ ತುಳಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕುಳಾಯಿಯಲ್ಲಿ ನಡೆದಿದೆ.

ಕುಷ್ಟಗಿ ಮೂಲದ ಸಂತೋಷ್ (28) ಮೃತ ಯುವಕ. ರಾತ್ರಿ ಬಿರುಗಾಳಿಗೆ ಕಡಿದು ರಸ್ತೆಗೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೃತಪಟ್ಟಿದ್ದಾನೆ.

ಮೃತ ಸಂತೋಷ್ ಬಾಡಿಗೆ ಮನೆಯಲ್ಲಿ ವಾಸವಿದ್ದು, ಕೈಗಾರಿಕಾ ಸಂಕೀರ್ಣಕ್ಕೆ ಕೆಲಸಕ್ಕೆ ತೆರಳುತ್ತಿದ್ದನು. ಎಂದಿನಂತೆ ಇಂದು ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದಾಗ ವಿದ್ಯುತ್ ತಂತಿ ತುಳಿದಿದ್ದಾನೆ. ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ : ಟ್ರಕ್ ಪಲ್ಟಿ : ಓರ್ವ ಸ್ಥಳದಲ್ಲೇ ಸಾವು, ಮತ್ತೊಬ್ಬನಿಗೆ ಗಾಯ

ದೋಣಿ ನೀರುಪಾಲು, ಯುವಕ ಬಚಾವ್

ಭಾರೀ ಮಳೆ ಹಿನ್ನಲೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದರೂ, ಅದನ್ನು ಲೆಕ್ಕಿಸದೆ ಮೀನುಗಾರಿಕೆಗೆ ನದಿಗಿಳಿದು ಯುವಕನೊಬ್ಬ ಆಪತ್ತು ತಂದುಕೊಂಡಿದ್ದಾನೆ. ಮೀನುಗಾರಿಕಾ ದೋಣಿ ಮುಳುಗಡೆಯಾಗಿದ್ದು, ಅದೃಷ್ಟವಶಾತ್ ಯುವಕನ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮಂಗಳೂರು ಹೊರವಲಯದ ಹರೇಕಳ-ಅಡ್ಯಾರ್ ಸೇತುವೆಯ ಕೆಳಭಾಗದಲ್ಲಿ ಈ ಘಟನೆ ನಡೆದಿದೆ. ರೆಡ್ ಅಲರ್ಟ್ ಲೆಕ್ಕಿಸದೆ ಯುವಕ ನದಿಗಿಳಿದು ಮೀನುಗಾರಿಕೆಗೆ ಮುಂದಾಗಿದ್ದನು. ನದಿ ನೀರಿನ ರಭಸಕ್ಕೆ ಯುವಕನಿದ್ದ ದೋಣಿ ಮಗುಚಿ ಬಿದ್ದಿದೆ. ಸ್ಥಳದಲ್ಲಿದ್ದ ಯುವಕರು ಕೂಡಲೇ ಸೇತುವೆ ಮೇಲಿನಿಂದ ನದಿಗೆ ಹಗ್ಗ ಇಳಿಸಿ ಯುವಕನನ್ನು ರಕ್ಷಿಸಿದ್ದಾರೆ. ಯುವಕನ ರಕ್ಷಣೆಯ ವೀಡಿಯೋ ಮೊಬೈಲಿನಲ್ಲಿ ಸೆರೆಯಾಗಿದೆ.

RELATED ARTICLES

Related Articles

TRENDING ARTICLES