Monday, December 23, 2024

ಸಚಿವ ಚಲುವರಾಯಸ್ವಾಮಿ ರಾಜೀನಾಮೆಗೆ ಹೆಚ್‌.ಡಿ ಕುಮಾರಸ್ವಾಮಿ ಆಗ್ರಹ 

ಮೈಸೂರು: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ವಜಾಗೊಳಿಸುವಂತೆ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. 

ಕೆಎಸ್‌ಆರ್‌ಟಿಸಿ ಉದ್ಯೋಗಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಇವರ ವರ್ಗಾವಣೆಯ ಹಿಂದೆ ಸಚಿವರ ಆದೇಶ ಮತ್ತು ಒತ್ತಡವಿದೆ ಎಂದು ಅಧಿಕಾರಿಗಳೇ ಹೇಳುತ್ತಿದ್ದಾರೆ. ಈ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಚಿವ ಚಲುವರಾಯಸ್ವಾಮಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

 ಇದನ್ನೂ ಓದಿ: ಶಾರದೆ ನೆಲೆಯಲ್ಲಿ ತಪ್ಪಿದ ಅನಾಹುತ : ಆರನೇ ಅಂತಸ್ತಿನಿಂದ ಧರೆಗುರುಳಿದ ಮೇಲ್ಛಾವಣಿ

ಸರಿಯಾದ ಸಮಯ ನೋಡಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ 

ಪೆನ್‌ಡ್ರೈವ್‌ನಲ್ಲಿ ಏನಿದೆ ಎಂಬ ಬಗ್ಗೆ ಸರ್ಕಾರ ಹಾಗೂ ಎಲ್ಲರೂ ಮಾತನಾಡುತ್ತಿದ್ದಾರೆ. ಕೆಲವರು ಇದೂ ಸಹ ಹಿಟ್ ಆ್ಯಂಡ್ ರನ್ ಅಂತಿದ್ದಾರೆ. ಈ ಬಗ್ಗೆ ನಾನು ಈಗ ಏನನ್ನೂ ಮಾತನಾಡುವುದಿಲ್ಲ. ಸರಿಯಾದ ಸಮಯ ನೋಡಿ ದಾಖಲೆಗಳನ್ನು ಬಿಡುಗಡೆ ಮಾಡುವೆ ಎಂದರು.

 ಚಾಲಕನ ಆತ್ಮಹತ್ಯೆ ಪ್ರಕರಣ 

ಚಾಲಕನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿಲ್ಲ. ಪೊಲೀಸರನ್ನು ಕೇಳಿದರೆ ವ್ಯಕ್ತಿ ಇನ್ನೂ ಸತ್ತಿಲ್ಲ, ಅದಕ್ಕೆ ಎಫ್‌ಐಆರ್ ಹಾಕಿಲ್ಲ ಎಂದು ಹೇಳಿದ್ದಾರೆ. ಆತ್ಮಹತ್ಯೆಗೂ ಮುನ್ನ ಜಗದೀಶ್ ಡೆತ್‌ನೋಟ್‌ನಲ್ಲಿ ಎಲ್ಲವನ್ನೂ ಬರೆದಿದ್ದಾನೆ. ಆದ್ದರಿಂದ ಈ ಬಗ್ಗೆ ತನಿಖೆ ಆಗಬೇಕು. ಮುಖ್ಯಮಂತ್ರಿಗಳು ತಕ್ಷಣ ಈ ಮಂತ್ರಿಯನ್ನು ವಜಾ ಮಾಡಿ, ಸರಿಯಾದ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.

 

 

RELATED ARTICLES

Related Articles

TRENDING ARTICLES