ಬೆಂಗಳೂರು : ನನ್ನ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿಗರಿಗೆ ಯಾವ ನೈತಿಕತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದರು.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಅನ್ನೋ ಕಾರಣಕ್ಕೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಂದ ಕಿತ್ತೋದ್ ಕಾಂಗ್ರೆಸ್ಸಿಗರು ರಾಜೀನಾಮೆ ಕೊಡಿಸಿದ್ದರು ಎಂದು ಆಕ್ರೋಶ ಹೊರಹಾಕಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆ ಇಟ್ಟು ಮಾತನಾಡಿದ್ದನ್ನು ನಾನು ನೋಡಿಲ್ಲ. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ ಯಾವತ್ತಾದರೂ ದಾಖಲೆ ಬಿಡುಗಡೆ ಮಾಡಿದ್ರಾ? ಸಿದ್ದರಾಮಯ್ಯ ದಾಖಲೆ ಇಟ್ಟು ಮಾತನಾಡಿದನ್ನು ನೋಡಲೇ ಇಲ್ಲ. ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ : ನಮ್ಮ ಡಿಸಿಎಂ ಸಾರ್ವಕಾಲಿಕ ಸತ್ಯ ಹೇಳಿದ್ದಾರೆ : ಬೊಮ್ಮಾಯಿ ಕೌಂಟರ್
ಕುಮಾರಸ್ವಾಮಿಗೆ ನೇರ ಟಾಂಗ್
ತಾರ್ಕಿಕ ಅಂತ್ಯ ಎಂಬುದು ನನ್ನಿಂದ ಅಲ್ಲ, ಈ ದೇಶದ ವ್ಯವಸ್ಥೆ. ರಾಜಕೀಯ ಪ್ರಭಾವ, ಧನ ಬಲ ಇರುವವರಿಂದ ತಾರ್ಕಿಕ ಅಂತ್ಯ ಅಸಾಧ್ಯ ಎಂದು ಕುಮಾರಸ್ವಾಮಿ ಗುಡುಗಿದರು. ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ, ಕುಮಾರಸ್ವಾಮಿಗೆ ನೇರ ಟಾಂಗ್ ಕೊಟ್ಟರು.
ಮುಖ್ಯಮಂತ್ರಿಯಾಗಿ ಏನು ಮಾಡಿದ್ದೀರಿ ನೀವು ಅಂತ ಗೊತ್ತಿದೆ. ನೀವು ಕೇರ್ ಮಾಡಲ್ಲ ಅಂದ್ರೆ ನಾವು ಮಾಡಲ್ಲ. ನೀವು ಕೇರ್ ಮಾಡಿದ್ರೆ, ನಾವು ಕೇರ್ ಮಾಡ್ತೇವೆ. ಇದಕ್ಕೆ ನಾವು ಹೆದರೋರಲ್ಲ. ನಾವು ಯಾವುದಕ್ಕೂ ಹೆದರಲ್ಲ ಎಂದು ಟಕ್ಕರ ಕೊಟ್ಟರು.