ಬೆಂಗಳೂರು: ರಾಜ್ಯದಲ್ಲಿ ಮಳೆಯಬ್ಬರ ಜೋರಾಗಿದ್ದು, ಎಲ್ಲೆಡೆ ಇನ್ನೆರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೌದು, ಕರಾವಳಿಯಲ್ಲಿ ಭಾಗಗಳಲ್ಲಿ ಮುಂದುವರಿದ ಧಾರಾಕಾರ ಮಳೆಗೆ ಇಂದು ಕೂಡ ಶಾಲೆ, ಕಾಲೇಜಿಗೆ ರಜೆ ಘೋಷಿಸಿ ಎಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಕರಾವಳಿಯಲ್ಲಿ ಧಾರಾಕಾರ ಮಳೆ : ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
‘ಆರೆಂಜ್’ ಅಲರ್ಟ್
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಈ ಮೂರು ಜಿಲ್ಲೆಗಳಿಗೆ ‘ಆರೆಂಜ್’ ಅಲರ್ಟ್’ ಘೋಷಿಸಲಾಗಿದೆ.
ಯಲ್ಲೋ ಅಲರ್ಟ್
ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನ ಹಲವೆಡೆ ಭಾರಿ ಮಳೆ ಬೀಳಲಿದೆ. ಈ ಜಿಲ್ಲೆಗಳನ್ನು ‘ಯಲ್ಲೋ ಅಲರ್ಟ್’ ಎಂದು ಘೋಷಿಸಲಾಗಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯಬಾರದು
ಒಳನಾಡಿನಲ್ಲಿ ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಕರಾವಳಿಯಲ್ಲಿ ಗಂಟೆಗೆ 55- 65 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಕರಾವಳಿಯ ಜಿಲ್ಲೆಗಳಲ್ಲಿಂದು ಶಾಲೆ, ಕಾಲೇಜಿಗೆ ರಜೆ ಘೋಷಣೆ
ಕರಾವಳಿಯಲ್ಲಿ ಮುಂದುವರಿದ ಧಾರಾಕಾರ ಮಳೆಯಬ್ಬರಕ್ಕೆ ಮೂರನೇ ದಿನವೂ ರಜೆ ಘೋಷಣೆ ಮಾಡಿ ಎಂದು ಜಿಲ್ಲಾಧಿಕಾರಿಗಳು ಘೋಷಣೆ ಮಾಡಿದ್ದಾರೆ. ಇನ್ನೂ ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಬರುವ ಸಾಧ್ಯತೆ ಇದ್ದು, ನದಿ, ತೊರೆಗಳ ಬಗ್ಗೆ ಜಾಗ್ರತೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ನಿನ್ನೇ ಕರಾವಳಿಯಲ್ಲಿ ಆದ ಧಾರಾಕಾರ ಮಳೆಗೆಒಂದೇ ದಿನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರ ಸಾವು ಹಿನ್ನೆಲೆ ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಜಿಲ್ಲಾಧಿಕಾರಿ ಮನವಿ