Sunday, November 3, 2024

ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಆಯ್ಕೆ

ಬೆಂಗಳೂರು : ಶಾಸಕ ರುದ್ರಪ್ಪ ಲಮಾಣಿ ಅವರು ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದರು ಅವರು, ತಮ್ಮ ಕಾರ್ಯಾವಧಿಯಲ್ಲಿ ಸಾರ್ವಜನಿಕ ಹಿತಾಸಕ್ತಿಯ ವಿಷಯ-ವಿಚಾರಗಳ ಚರ್ಚೆಯಲ್ಲಿ ಸದನದ ಸರ್ವಸದಸ್ಯರು ಹೆಚ್ಚು ಪಾಲ್ಗೊಳ್ಳುವಂತಾಗಲಿ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವ ಕೆಲಸವಾಗಲೆಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸದನದಲ್ಲಿ 2,400 ಕೋಟಿ ಬಾಂಬ್ ಸಿಡಿಸಿದ ಯತ್ನಾಳ್

ನಮ್ಮ ಮಾತೇ ಕೇಳಬೇಕು

ರುದ್ರಪ್ಪ ಲಮಾಣಿ ಅವರು ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ವಿಧಾನಸಭೆ ಉಪಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ವಿರೋಧ ಪಕ್ಷದ ಸದಸ್ಯರಿಗೆ ಕೈ ಕುಲುಕಿದರು. ಇದೇ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಮ್ಮ ಜಿಲ್ಲೆಯವರು ನಮ್ಮ ಮಾತೇ ಕೇಳಬೇಕು ಎಂದು ಹೇಳಿದರು.

ಉಚ್ಛಾಟನೆ ಹಿಂಪಡೆದ ಕಾಂಗ್ರೆಸ್​

ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಮಾಜಿ ಶಾಸಕ ಅಜ್ಜಂಪೀರ್​ ಖಾದ್ರಿ ನಿರಾಳರಾಗಿದ್ದಾರೆ. ಇವರ ಉಚ್ಛಾಟನೆಯನ್ನು ಕಾಂಗ್ರೆಸ್ ಹಿಂಪಡೆದಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದಕ್ಕೆ ಮಾಜಿ ಶಾಸಕ ಅಜ್ಜಂಪೀರ್​ ಖಾದ್ರಿಯನ್ನು 6 ವರ್ಷ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಇದೀಗ, ಕಾಂಗ್ರೆಸ್ ಶಿಸ್ತು ಸಮಿತಿ ಮತ್ತೆ ಉಚ್ಚಾಟನೆ ಹಿಂಪಡೆದಿದೆ.

RELATED ARTICLES

Related Articles

TRENDING ARTICLES