Saturday, May 11, 2024

ಪ್ರೌಢಶಾಲಾ ಮಕ್ಕಳಿಗೆ ಇನ್ನುಮುಂದೆ ಮೊಟ್ಟೆ ಭಾಗ್ಯ

ಬೆಂಗಳೂರು: 10 ನೇ ತರಗತಿವರೆಗೆ ಸರ್ಕಾರಿ, ಅನುದಾನಿತ ಶಾಲೆಗಳ ಮಕ್ಕಳಿಗೆ ಮೊಟ್ಟೆ ಭಾಗ್ಯ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್​ ಅಧಿವೇಶನದಲ್ಲಿ ಘೋಷಣೆ ಮಾಡಿದ್ದಾರೆ.

ಹೌದು,  ಮಕ್ಕಳಲ್ಲಿ ಪೌಷ್ಟಿಕಾಂಶ ಕಾಪಾಡುವ ದೃಷ್ಟಿಯಿಂದ ಈ ಹಿಂದೆ ಜಾರಿಯಲ್ಲಿದ್ದ ಯೋಜನೆಯನ್ನು ಮುಂದುವರೆಸುವುದಾಗಿ ಹೇಳಿದ್ದಾರೆ.  ಒಂದರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಬಾರಿ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣನ್ನು ನೀಡಲಾಗುತ್ತಿತ್ತು. ಆದರೆ ಇದೀಗ ಅದನ್ನು ಎರಡು ದಿನ ನೀಡುವುದಾಗಿ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Karnataka Budget 2023 : ಬ್ರ್ಯಾಂಡ್ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ಬಂಪರ್ ಆಫರ್

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಇದು ಅನ್ವಯವಾಗಲಿದೆ. ಮುಂದಿನ ದಿನದಲ್ಲಿ 10ನೆ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಈ ಯೋಜನೆಯನ್ನು ಅನ್ವಯವಾಗಲಿದ್ದು ಎಂದು ತಿಳಿಸಿದ್ದಾರೆ.

ಇದಕ್ಕಾಗಿ ವಿಶೇಷ ಹಣವನ್ನು ಮೀಸಲಿಡಲಾಗಿದೆ. ಈ ಪ್ರಕಾರ ಒಟ್ಟು 280 ಕೋಟಿ ರೂಗಳನ್ನು ವ್ಯಯಿಸಿ 60 ಲಕ್ಷ ವಿದ್ಯಾರ್ಥಿಗಳಿಗೆ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣು ನೀಡಿ ಇದರ ಪ್ರಯೋಜನವನ್ನು ಒದಗಿಸಲು ಸರ್ಕಾರ ಮುಂದಾಗಿದೆ ಎಂದು ಘೋಷಣೆ ಮಾಡಿದ್ದಾರೆ.

 

RELATED ARTICLES

Related Articles

TRENDING ARTICLES