Friday, May 10, 2024

ಬೊಮ್ಮಾಯಿ ಮಂಡಿಸಿದ್ದ ಬಜೆಟ್‌ಗೆ ಒಂದು ರೂಪ ಕೊಟ್ಟಿದ್ದೇವೆ : ಡಿ.ಕೆ ಶಿವಕುಮಾರ್

ಬೆಂಗಳೂರು : ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ್ದ ರಾಜ್ಯ ಬಜೆಟ್​​ಗೆ ನಾವು ಒಂದು ರೂಪ ಕೊಟ್ಟಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರಿಗೆ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದರು.

ಬಜೆಟ್ ಮಂಡನೆ ಬಗ್ಗೆ ವಿಪಕ್ಷಗಳ ಟೀಕೆ ವಿಚಾರ ಕುರಿತು ಮಾತನಾಡಿ, ಪ್ರಣಾಳಿಕೆ ಭರವಸೆಗಳನ್ನು ಬಜೆಟ್​​​ನಲ್ಲಿ ಘೋಷಣೆ ಮಾಡಿದ್ದೇವೆ. ಬ್ರಾಂಡ್ ಬೆಂಗಳೂರು ಹೆಸರು ಉಳಿಸುವ ಕೆಲಸ ಮಾಡುತ್ತೇವೆ. ನಮಗೆ ಸಂಪನ್ಮೂಲಗಳ ಕ್ರೋಢೀಕರಣ ಗೊತ್ತಿದೆ ಎಂದು ತಿರುಗೇಟು ಕೊಟ್ಟರು.

ಇದನ್ನೂ ಓದಿ : ಡಿಕೆಶಿ ಮೇಲೆ ಸಿದ್ದರಾಮಯ್ಯ ಸೇಡು ತೀರಿಸಿಕೊಂಡಿದ್ದಾರೆ : ಬಿ.ವೈ ವಿಜಯೇಂದ್ರ

ಗಾಂಧಿ ಕುಟುಂಬ ದೇಶಕ್ಕೆ ತ್ಯಾಗ ಮಾಡಿದೆ

ಗುಜರಾತ್ ಹೈಕೋರ್ಟ್​ನಿಂದ ರಾಹುಲ್ ಗಾಂಧಿ ಅರ್ಜಿ ವಜಾ ವಿಚಾರ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದು ದೊಡ್ಡ ಅವಮಾನ. ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ 7 ಲಕ್ಷ ಲೀಡ್​ನಲ್ಲಿ ಗೆದ್ದಿದ್ದಾರೆ. ಗಾಂಧಿ ಕುಟುಂಬ ದೇಶಕ್ಕೆ ತ್ಯಾಗ ಮಾಡಿದೆ ಎಂದು ಹೇಳಿದರು.

ಇದು ಬಿಜೆಪಿಯ ಕುತಂತ್ರ

ನಮ್ಮ ರಾಜ್ಯದಲ್ಲಿ ಭಾಷಣ ಮಾಡಿದ್ದಕ್ಕೆ ರಾಹುಲ್ ಗಾಂಧಿ ವಿರುದ್ಧ ‌ಕೇಸ್ ಹಾಕಲಾಗಿದೆ. ಇದು ಬಿಜೆಪಿಯ ಕುತಂತ್ರ. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡಿದ್ದರು. ಈ ಮೂಲಕ ರಾಹುಲ್ ಗಾಂಧಿ ದೇಶ ಒಗ್ಗೂಡಿಸುವ ಕೆಲಸ ಮಾಡಿದ್ದಾರೆ. ಇದನ್ನು ಸಹಿಸದೇ ಲೋಕಸಭೆ ಸದಸ್ಯತ್ವದಿಂದ ವಜಾ ಮಾಡಿಸಿದ್ದಾರೆ. ಸುಪ್ರೀಂಕೋರ್ಟ್​ನಲ್ಲಿ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES