ಉತ್ತರ ಕನ್ನಡ : ಮಳೆಯಿಂದ ರಾಜ್ಯದಲ್ಲಿ 21 ಜನ ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಅವಾಂತರ ಸೃಷ್ಟಿ ಮಾಡಿದೆ. ಮಂಗಳೂರಿನಲ್ಲಿ 6, ಉಡುಪಿಯಲ್ಲಿ 4, ಉತ್ತರ ಕನ್ನಡದಲ್ಲಿ 3 ಮಂದಿ ಸಿಡಿಲಿಗೆ ಸಾವನ್ನಪ್ಪಿದ್ದಾರೆ. 47ಕ್ಕೂ ಹೆಚ್ಚು ಜಾನುವಾರಗಳು ಸಾವನ್ನಪ್ಪಿವೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ : ಅರ್ಚಕ ಕೆಲ್ಸದಿಂದ ತೆಗೆದಿದ್ದಕ್ಕೆ ನದಿ ಮಧ್ಯೆ ಜೋಕಾಲಿ ಕಟ್ಟಿ ಧರಣಿ ಕೂತ ಪೂಜಾರಿ!
ರಾಜ್ಯ ಸರ್ಕಾರದಿಂದ ಪರಿಹಾರ
ಈ ಭಾಗದಲ್ಲಿ ಮನೆಗಳು ಹಾನಿಯಾಗಿವೆ. ಧರೆ ಕುಸಿತದಿಂದ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ನೆರೆ ಪಿಡೀತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇವೆ. ಅಧಿಕಾರಿ ವರ್ಗಕ್ಕೆ ಚುರುಕು ಮುಟ್ಟಿಸಲು ಭೇಟಿ ನೀಡುತ್ತಿದ್ದೇವೆ. ಎಲ್ಲೆಲ್ಲಿ ಹಾನಿಯಾಗಿದೆ ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಹಾನಿಯಾಗಿದ್ದಕ್ಕೆ ರಾಜ್ಯ ಸರ್ಕಾರ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಜುಲೈ ಬಳಿಕ ಮೋಡ ಬಿತ್ತನೆ
ರಾಜ್ಯಕ್ಕೆ ಮುಂಗಾರು ತಡವಾಗಿ ಪ್ರವೇಶವಾಗಿದೆ. ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆ. ಜುಲೈ ಕೊನೆ ವಾರದವರೆಗೆ ನೋಡುತ್ತೇವೆ. ಬಳಿಕ ಮೋಡ ಬಿತ್ತನೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇವೆ. ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ಮೋಡ ಬಿತ್ತನೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.