ಕಲಬುರಗಿ: ಕುಡಿಯುವ ನೀರು ಯೋಜನೆಯ ಅನುಷ್ಠಾನ ಕುರಿತು ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳ ಸಚಿವ ಪ್ರಿಯಾಂಕ್ ಖರ್ಗೆ ಕ್ಲಾಸ್ ತಗೆದುಕೊಂಡಿದ್ದಾರೆ.
ಹೌದು, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಅಧಿಕಾರಿಗಳಿಗೆ ಪ್ರಶ್ನೆ ಮಾಡಿ ನೀವು ಇಲ್ಲಿಗೆ ಬಂದಿರುವುದು ಸರ್ಕಾರದ ದ್ರಾಕ್ಷಿ, ಗೋಡಂಬಿ ತಿನ್ನೋಕ್ ಎಂದು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ: ಸಿಎಂ ಸಿದ್ದುಗೆ ಅನಾರೋಗ್ಯ: ಇಂದಿನ ಬಹುತೇಕ ಕಾರ್ಯಕ್ರಮಗಳು ರದ್ದು!
ಕರ್ನಾಟಕ ನಗರ ಕುಡಿಯುವ ನೀರು ಯೋಜನೆಯ ಸೂಪರಿಂಟೆಂಡಿಂಗ್ ಎಂಜಿನಿಯರ್ ಕಾಂತರಾಜ್ ಹಾಗೂ ಎಲ್ ಅಂಡ್ ಟಿ ಕಂಪನಿಯ ಅಧಿಕಾರಿ ಸಂಜಯ್ ಅವರು ಪೈಪ್ ಲೈನ್ ಗಾಗಿ ನೆಲ ಅಗೆದು ಹಾಗೆಯೇ ಬಿಟ್ಟಿರುವ ಕುರಿತು ಸಮರ್ಪಕ ಸಮಜಾಯಿಷಿ ನೀಡಲಿಲ್ಲ.