ಮೈಸೂರು: ಒಬ್ಬ ವಿಪಕ್ಷ ನಾಯಕನಿಲ್ಲದೆ ಬಜೆಟ್ ಮಂಡನೆಯಾಗಿರುವುದು ನಾಚಿಕೆಯ ಸಂಗತಿ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಬಿಜೆಪಿ ವಿರುದ್ಧ ಟೀಕೆ ಮಾಡಿದರು.
ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವಿರೋಧ ಪಕ್ಚ ನಾಯಕನಿಲ್ಲದ ಬಿಜೆಪಿಯಲ್ಲಿ ಅರಾಜಕತೆ ಇದೆ ಎಂಬುದು ಎದ್ದು ಕಾಣುತ್ತದೆ. ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಟೀಕೆ ಮಾಡುವ ಬಿಜೆಪಿ ನಾಯಕರಿಗೆ ಒಬ್ಬ ನಾಯಕನ್ನು ಆಯ್ಕೆ ಮಾಡುವ ಸಾಮಾಥ್ಯವಿಲ್ಲವೇ ಎಂದು ಬಿಜೆಪಿ ವಿರುದ್ಧ ವ್ಯಂಗ್ಯದ ರೀತಿಯಲ್ಲಿ ಟೀಕೆ ಮಾಡಿದರು.
ಇದನ್ನೂ ಓದಿ : ವಿಪಕ್ಷ ನಾಯಕನ ಆಯ್ಕೆ ವಿಳಂಬದಿಂದ ಪಕ್ಷಕ್ಕೆ ಮುಜುಗರ : ಬೇಸರ ಹೊರಹಾಕಿದ ರವಿಕುಮಾರ್
ರಾಜ್ಯದ ರಾಜಕೀಯ ಇತಿಹಾಸದಲ್ಲಿ ಒಬ್ಬ ವಿರೋಧ ಪಕ್ಷದ ನಾಯಕನಿಲ್ಲದೆ ಬಜೆಟ್ ಮಂಡನೆಯಾಗಿದೆ ಎಂದರೆ ಇದು ನಾಚಿಕೆಯ ಸಂಗತಿ. ಇದು ಬಿಜೆಪಿಯಲ್ಲಿ ಅರಾಜಕತೆ ಇದೇ ಎಂಬುದನ್ನು ತೋರಿಸುತ್ತದೆ. ಕಾಂಗ್ರೆಸ್ ಗ್ಯಾರಂಟಿಗಳನ್ನು ಟೀಕೆ ಮಾಡುವ ಬಿಜೆಪಿಗೆ ಈ ರೀತಿ ಆಗಿರುವುದು ನಾಚಿಕೆಗೇಡು. ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕ ಎಂದರೆ ಕುಮಾರಸ್ವಾಮಿ, ಅವರು ವಿರೋಧ ಪಕ್ಷದ ನಾಯಕರಾಗಿದ್ದಾರೆ ಎಂದು ಟೀಕಿಸಿದರು.