Tuesday, December 24, 2024

Powertv Impact : ಅಕ್ರಮ ಬಂದೂಕು ತಯಾರಿ ಮಾಡುತ್ತಿದ್ದ ಆರೋಪಿ ಬಂಧನ.

ಚಿಕ್ಕಬಳ್ಳಾಪುರ : ಪವರ್ ಟಿವಿ ಇಂಪ್ಯಾಕ್ಟ್: ಅಕ್ರಮ ಶಸ್ತ್ರಾಸ್ತ್ರ ತಯಾರು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂದಿಸಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದುಗೆ ಅನಾರೋಗ್ಯ: ಇಂದಿನ ಬಹುತೇಕ ಕಾರ್ಯಕ್ರಮಗಳು ರದ್ದು!

ಲೋಕೇಶ್ ಬಂಧಿತ ಆರೋಪಿ, ಜಿಲ್ಲೆಯ ಗುಡಿಬಂಡೆ ತಾಲ್ಲೂಕು ಮರಿಮಾಕಲಹಳ್ಳಿಯಲ್ಲಿ ಅಕ್ರಮ ಶಸ್ತ್ರಾಸ್ತ್ರ ತಯಾರಿಕೆಯಲ್ಲಿ ತೊಡಗಿದ್ದ ಎಂಬ ಆರೋಪದಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೇವಲ 18-20 ಸಾವಿರಕ್ಕೆ ಬಂದೂಕು ತಯಾರಿ, ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವ ಕುರಿತು ನಿಮ್ಮ ಪವರ್ ಟಿವಿಯಲ್ಲಿ ವಿಸ್ತ್ರುತ ವರದಿ ಬಿತ್ತರಗೊಳಿಸಿತ್ತು.  ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾ ಪೊಲೀಸ್ ಚಿಕ್ಕಬಳ್ಳಾಪುರ ಡಿವೈಎಸ್ಪಿ, ವಿ.ಕೆ.ವಾಸುದೇವ್ ಮತ್ತು ಪಿಎಸ್ಐ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿ ಲೋಕೇಶ್​ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಎಸ್ಪಿ ಡಿ.ಎಲ್.ನಾಗೇಶ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES