Saturday, December 28, 2024

ಜೈನ ಮುನಿಗಳ ಭೀಕರ ಹತ್ಯೆ ಖಂಡನೀಯ ; ಧರ್ಮದರ್ಶಿ ಡಾ.ವೀರೇಂದ್ರ ಹೆಗ್ಗಡೆ

ಮಂಗಳೂರು: ನಾಪತ್ತೆಯಾಗಿದ್ದ ಜೈನ ಮುನಿಗಳು ಶವವಾಗಿ ಪತ್ತೆಯಾಗಿರುವ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಮಾರಲ್ ಪೋಲಿಸಿಂಗ್ ನಡೆದಿತ್ತು : ಸಿದ್ದರಾಮಯ್ಯ

ಮಂಗಳೂರಿನಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು ,ಚಿಕ್ಕೋಡಿಯಲ್ಲಿ ಜೈನ ಮುನಿಗಳ ಭೀಕರ ಹತ್ಯೆ ಘಟನೆಯಿಂದ  ಮನಸ್ಸಿಗೆ ತುಂಬಾ ನೋವಾಗಿದೆ. ದಿಗಂಬರ ಮುನಿಗಳ ಈ ರೀತಿಯ ಹತ್ಯೆ ಇತಿಹಾಸದಲ್ಲಿಯೇ ಪ್ರಥಮ ಎಂದು ನೋವಿನಿಂದ ಹೇಳಿದ್ದಾರೆ.

ರಾಜ್ಯದಲ್ಲಿನ ಜೈನ ಮುನಿಗಳಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿಕೊಳ್ಳುತ್ತಾ  ಮತ್ತು ಈ ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಪತ್ತೆಹಚ್ಚಿರುವ ಪೊಲೀಸ್ ಇಲಾಖೆಗೆ ಅಭಿನಂದನೆ ತಿಳಿಸುತ್ತೇನೆ,  ತಪ್ಪು ಯಾರೇ ಮಾಡಿದ್ದರು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದರು.

RELATED ARTICLES

Related Articles

TRENDING ARTICLES